ಶಿವಮೊಗ್ಗ LIVE
ಶಿವಮೊಗ್ಗ: ಬೆಂಗಳೂರಿನ ಕೋಗಿಲು ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ ಅನ್ಯಭಾಷಿಕರಿಗೆ ಸರ್ಕಾರಿ ಮನೆಗಳನ್ನು ಹಂಚುವ ಮೊದಲು 60 ವರ್ಷಗಳ ಹಿಂದೆ ಸಂತ್ರಸ್ತರಾಗಿ ಮನೆ, ಜಮೀನು ಕಳೆದು ಕೊಂಡು ಶರಾವತಿ ಮುಳುಗಡೆ ಸಂತ್ರಸ್ತರಿಗೆ ಮೊದಲು ಮನೆಗಳ ಹಕ್ಕು ಪತ್ರ, ಜಮೀನಿಗೆ ದಾಖಲೆಗಳನ್ನು ನೀಡುವಂತೆ ಶಾಸಕ ಆರಗ ಜ್ಞಾನೇಂದ್ರ ಸರ್ಕಾರಕ್ಕೆ (Government) ಆಗ್ರಹಿಸಿದರು.

ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಡಿದ ಆರಗ ಜ್ಞಾನೇಂದ್ರ, ಕೋಗಿಲು ಪ್ರದೇಶದಲ್ಲಿ ಅನಧಿಕೃತವಾಗಿ ವಾಸಿಸುತ್ತಿರುವವರಿಗೆ ಸರ್ಕಾರ ತರಾತುರಿಯಲ್ಲಿ ಹಕ್ಕುಪತ್ರ ನೀಡಲು ಮುಂದಾಗಿದೆ. ಅಲ್ಲಿ ಸುಮಾರು 167 ಶೆಡ್‌ಗಳಿದ್ದು, ಮತಬ್ಯಾಂಕ್ ರಾಜಕಾರಣಕ್ಕಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಕೇರಳ ಸೇರಿದಂತೆ ಹೊರ ರಾಜ್ಯಗಳಿಂದ ಬಂದವರಿಗೆ ಇಲ್ಲಿ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.
ಶರಾವತಿ ಸಂತ್ರಸ್ತರು 60 ವರ್ಷಗಳಿಂದ ಹಕ್ಕುಪತ್ರಕ್ಕಾಗಿ ಕಾಯುತ್ತಿದ್ದಾರೆ. ಶಿವಮೊಗ್ಗ, ಶಿಕಾರಿಪುರ, ತೀರ್ಥಹಳ್ಳಿ ಮತ್ತು ಹೊಸನಗರ ಭಾಗದಲ್ಲಿ ಸಂತ್ರಸ್ತರಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಈ ಹಿಂದೆ ಪಾದಯಾತ್ರೆ ನಡೆಸಿದಾಗ ಅಧಿಕಾರಕ್ಕೆ ಬಂದ ಕೂಡಲೇ ಹಕ್ಕುಪತ್ರ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಅದು ಈವರೆಗೆ ಈಡೇರಿಲ್ಲ ಎಂದು ಆರಗ ಜ್ಞಾನೇಂದ್ರ ನೆನಪಿಸಿದರು.
ಸಂತ್ರಸ್ತರ ಜಮೀನು ಸರ್ವೆ ಕಾರ್ಯ ಸ್ಥಗಿತಗೊಂಡಿದೆ. ಜಿಲ್ಲಾಧಿಕಾರಿಗಳ ಬದಲಾವಣೆಯಿಂದಾಗಿ ಕಡತಗಳ ವಿಲೇವಾರಿ ಮತ್ತಷ್ಟು ವಿಳಂಬವಾಗುತ್ತಿದೆ. ಸರ್ಕಾರ ಮೊದಲು ಸ್ಥಳೀಯ ಶರಾವತಿ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ » ಹೊಸನಗರ ಕ್ಷೇತ್ರ, ಶೀಘ್ರದಲ್ಲೇ ಪಾದಯಾತ್ರೆ ಆಯೋಜನೆ
ಸುದ್ದಿಗೋಷ್ಠಿಯಲ್ಲಿ ಹೆದ್ದೂರು ನವೀನ್, ಪ್ರಮುಖರಾದ ಹೂವಪ್ಪ ಕೂಡಿ, ಅಶೋಕ್ ಕಿರುವಾಸೆ, ಸುಧಾಕರ್, ಬಿ.ಎಂ. ಕೃಷ್ಣಮೂರ್ತಿ, ರಾಮಣ್ಣ ಮತ್ತಿತರರು ಇದ್ದರು.
LATEST NEWS
- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor
ನಿತಿನ್ ಆರ್.ಕೈದೊಟ್ಲು





