ಶಿವಮೊಗ್ಗದಲ್ಲಿ ಪೊರಕೆ ಹಿಡಿದು ದೇಗುಲದ ಆವರಣದ ಸ್ವಚ್ಛಗೊಳಿಸಿದ ಸಂಸದ, ಶಾಸಕರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 JANUARY 2024

SHIMOGA : ರಾಷ್ಟ್ರವ್ಯಾಪಿ ದೇಗುಲ ಸ್ವಚ್ಛತಾ ಅಭಿಯಾನದ ಹಿನ್ನೆಲೆ ನಗರದ ಹೊಳೆಹೊನ್ನೂರು ರಸ್ತೆ ರೈಲ್ವೆ ಗೇಟ್‌ ಪಕ್ಕದಲ್ಲಿರುವ ಅರಕೇಶ್ವರ ದೇಗುಲದಲ್ಲಿ ಶಿವಮೊಗ್ಗ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್‌.ಎನ್.ಚನ್ನಬಸಪ್ಪ ಪೊರಕೆ ಹಿಡಿದು ಶ್ರಮದಾನ ಮಾಡಿದರು.

ಸಂಕ್ರಾಂತಿಯಂದು ಸೂರ್ಯ ತನ್ನ ಪಥ ಬದಲಿಸಿಕೊಂಡು ಹೆಚ್ಚು ಬೆಳಕು ನೀಡುತ್ತಾನೆ. ಇಂತಹ ಸಂದರ್ಭ ನಮ್ಮ ವಾಸ ಸ್ಥಳದ ಸಮೀಪದ ದೇವಸ್ಥಾನದ ಸ್ವಚ್ಛತೆಗೆ ಆದ್ಯತೆ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ. ಈ ಆಂದಲೋನಕ್ಕೆ ನಾವು ಕೈ ಜೋಡಿಸಿದ್ದೇವೆ. ರಾಜಕಾರಣ ಅಂದರೆ ಚುನಾವಣೆಗೆ ಸೀಮಿತಗೊಳ್ಳದೆ ಇಂತಹ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕಿದೆ.ಬಿ.ವೈ.ರಾಘವೇಂದ್ರ, ಸಂಸದ

ವಿಧಾನ ಪರಿಷತ್‌ ಸದಸ್ಯರಾದ ಎಸ್‌.ರುದ್ರೇಗೌಡ, ಡಿ.ಎಸ್.‌ಅರುಣ್‌, ಪ್ರಮುಖರಾದ ಗಿರೀಶ್‌ ಪಟೇಲ್‌ ಸೇರಿದಂತೆ ಬಿಜೆಪಿಯ ಹಲವು ಪ್ರಮುಖರು ಈ ಸಂದರ್ಭ ಹಾಜರಿದ್ದರು.

ಇದನ್ನೂ ಓದಿ – ಸಿಗಂದೂರು ಜಾತ್ರೆಗೆ ಸಿದ್ಧತೆ ಪೂರ್ಣ, ಮೂಲ ಸ್ಥಾನದಲ್ಲಿ ಪೂಜೆ ಆರಂಭ

BJP BY Raghavendra - Arkeshwara temple

BJP BY Raghavendra - Arkeshwara temple

BJP BY Raghavendra - Arkeshwara temple

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment