ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 AUGUST 2023
SHIMOGA : ದಿಢೀರ್ ಏರಿಯಾ ಡಾಮಿನೇಷನ್ (Area Domination) ವಿಶೇಷ ಗಸ್ತು (Patrol) ನಡೆಸಿದ ಪೊಲೀಸರು ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ (Bhadravathi) ಹಲವರನ್ನು ವಶಕ್ಕೆ ಪಡೆದು 105 ಲಘು ಪ್ರಕರಣ ದಾಖಲು ಮಾಡಿದ್ದಾರೆ. ಇದೇ ವೇಳೆ ಗಾಂಜಾ ಸೇವನೆ ಮಾಡಿರುವ ಐವರು ಪತ್ತೆಯಾಗಿದ್ದಾರೆ.
ಶಿವಮೊಗ್ಗ – ಎ ಮತ್ತು ಬಿ, ಭದ್ರಾವತಿ ಉಪ ವಿಭಾಗಗಳಲ್ಲಿ ಪೊಲೀಸ್ ಇಲಾಖೆ ವತಿಯಿಂದ ದಿಢೀರ್ ಏರಿಯಾ ಡಾಮಿನೇಷನ್ ವಿಶೇಷ ಗಸ್ತು ನಡೆಸಲಾಯಿತು. ಖಾಲಿ ಸ್ಥಳಗಳು, ನಗರದ ಹೊರ ವಲಯದಲ್ಲಿ ಪೊಲೀಸರು ದಿಢೀರ್ ಪರಿಶೀಲನೆ ನಡೆಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವ ಮತ್ತು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದರು. ಠಾಣೆಗಳಿಗೆ ಕರೆತಂದು ಪರ್ವಾಪರ ಪರಿಶೀಲಿಸಿದರು.

ಇದನ್ನೂ ಓದಿ – ಎಂಟು ವರ್ಷದ ಪೋರ ಶಿವಮೊಗ್ಗ ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್, ಸಂಜೆ ಅಧಿಕಾರ ಸ್ವೀಕಾರ..!
ಏರಿಯಾ ಡಾಮಿನೇಷನ್ ವಿಶೇಷ ಗಸ್ತು ವೇಳೆ 105 ಲಘು ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದೇ ವೇಳೆ ಗಾಂಜಾ ಸೇವನೆ ಮಾಡಿರುವ ಐವರು ಪತ್ತೆಯಾಗಿದ್ದು ವೈದ್ಯಕೀಯ ಪರೀಕ್ಷೆ ನಡೆಸಿ ಅವರ ವಿರುದ್ದ ಎನ್‌ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಲಾಗಿದೆ.
.jpeg)
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು















