ಶಿವಮೊಗ್ಗ ಲೈವ್
ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020
ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಮೇಲ್ವಿಚಾರಣೆಗೆ ಸರ್ಕಾರ ರಚಿಸಿರುವ ಸಮಿತಿಯನ್ನು ಕೂಡಲೆ ರದ್ದುಗೊಳಿಸಬೇಕು ಎಂದು ಜಿಲ್ಲಾ ಆರ್ಯ ಈಡಿಗರ ಸಂಘ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದೆ.
ಸಂಘದ ಜಿಲ್ಲಾಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ ನೇತೃತ್ವದ ನಿಯೋಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
ಸಮಿತಿ ರಚನೆ ವಿರೋಧಿಸಿ ಸಿಗಂದೂರು ಉಳಿಸಿ ಹೋರಾಟ ಸಮಿತಿ ರಚಿಸಲಾಗಿದೆ. ನವೆಂಬರ್ 9ರಂದು ಈ ಸಂಬಂಧ ಈಡಿಗರ ಸಮುದಾಯ ಭವನದಲ್ಲಿ ಸಭೆ ನಡೆಸಲಾಯಿತು. ಮೇಲ್ವಿಚಾರಣ ಸಮಿತಿ ರದ್ದುಗೊಳಿಸುವಂತೆ ಸರ್ಕಾರಕ್ಕೆ ಗಡುವು ನೀಡಲಾಗಿದೆ. ಹಾಗಾಗಿ ಕೂಡಲೆ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಅವರನ್ನು ಒತ್ತಾಯಿಸಲಾಯಿತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
