ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಜುಲೈ 2020
ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ರೂ. ಗೌರವಧನ ನೀಡಬೇಕು. ಕರೋನ ವಿರುದ್ಧ ಹೋರಾಟಕ್ಕೆ ಅಗತ್ಯ ಇರುವಷ್ಟು ರಕ್ಷಣಾ ಸಾಮಗ್ರಿ ಒದಗಿಸಬೇಕು ಎಂದು ಒತ್ತಾಯಿತಿ ಆಶಾ ಕಾರ್ಯಕರ್ತೆಯರು ಇವತ್ತು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಿದರು.
ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಆಶಾ ಕಾರ್ಯಕರ್ತರು ಮುತ್ತಿಗೆ ಹಾಕಿದರು. ಮಾಸಿಕ 12 ಸಾವಿರ ಗೌರವ ಧನ ನೀಡುವಂತೆ ಒತ್ತಾಯಿಸಿ ಜುಲೈ 10 ರಿಂದ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೆ ಈವರೆಗೂ ಸರ್ಕಾರ ನಮ್ಮತ್ತ ಗಮನ ಹರಿಸಿಲ್ಲ ಎಂದು ಆರೋಪಿಸಿದರು.
ಆರೋಗ್ಯ ತಪಾಸಣೆ, ಉಚಿತ ಚಿಕಿತ್ಸೆ
ಕರೋನ ವಿರುದ್ಧದ ಹೋರಾಟದಲ್ಲಿ ತೊಡಗಿರುವ ಆಶಾ ಕಾರ್ಯಕರ್ತೆಯರಿಗೆ ರಕ್ಷಣಾ ಸಾಮಾಗ್ರಿ ನೀಡಬೇಕು. ಆಗಾಗ ಆಶಾ ಕಾರ್ಯಕರ್ತೆಯರ ಆರೋಗ್ಯ ತಪಾಸಣೆ ನಡೆಸಬೇಕು. ಒಂದು ವೇಳೆ ಪಾಸಿಟಿವ್ ಬಂದರೆ ಉಚಿತವಾಗಿ ಚಿಕಿತ್ಸೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.
ರಾಜೇಶ್ವರಿ, ಪ್ರೇಮಾ, ಶೀಲಾಬಾಯಿ, ಚಂದ್ರಕಲಾ, ಸತ್ಯವತಿ, ಸ್ವಾತಿ, ಆಶಾ, ವಸಂತಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]