ಶಿವಮೊಗ್ಗದಲ್ಲಿ ಜಿ+2 ಮನೆಗಳ ಹಂಚಿಕೆಗೆ ಅರ್ಜಿ ಅಹ್ವಾನ, ಯಾರೆಲ್ಲ, ಹೇಗೆ ಅರ್ಜಿ ಸಲ್ಲಿಸಬೇಕು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 28 ಫೆಬ್ರವರಿ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಗೋಪಿಶೆಟ್ಟಿ ಕೊಪ್ಪ ಗ್ರಾಮದಲ್ಲಿ ನಿರ್ಮಿಸಿರುವ ಜಿ+2 ಮಾದರಿಯ ಮನೆಗಳನ್ನು ಹಂಚುವ ಸಂಬಂಧ ಹೊಸದಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಹಾನಗರ ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Shimoga Nanjappa Hospital Testing List

ಗೋಪಿಶೆಟ್ಟಿಕೊಪ್ಪ ಗ್ರಾಮದ 19.23 ಎಕರೆ ಜಮೀನಿನಲ್ಲಿ ಜಿ+2 ಮಾದರಿ ಮನೆಗಳನ್ನು ನಿರ್ಮಿಸಲಾಗಿದೆ. ನಿವೇಶನ ರಹಿತರಿಗೆ ಈ ಮನೆಗಳ ಹಂಚಿಕೆ ಮಾಡಲು ಶಿವಮೊಗ್ಗ ನಗರ ಆಶ್ರಯ ಸಮಿತಿ ನಿರ್ಧರಿಸಿದೆ.

ಅರ್ಜಿ ಸಲ್ಲಿಸುವುದು ಹೇಗೆ?

shivamoggacitycorp.org ಜಾಲತಾಣದ Ashraya Yojane Application ಮೆನುವಿನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಏಪ್ರಿಲ್ 30 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಮೇ 07 ಬ್ಯಾಂಕ್ ಮೂಲಕ ನಿಗದಿತ ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ.

ಯಾರೆಲ್ಲ ಅರ್ಜಿ ಸಲ್ಲಿಸಬಹುದು?

18 ವರ್ಷ ಮೇಲ್ಪಟ್ಟ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಪುರುಷ ಅಭ್ಯರ್ಥಿಯಾಗಿದ್ದಲ್ಲಿ ಮಾಜಿ ಸೈನಿಕ, ವಿಕಲಚೇತನ, ವಿಧುರ ಹಾಗೂ ಹಿರಿಯ ನಾಗರಿಕ ಅಭ್ಯರ್ಥಿಯಾಗಿರಬೇಕು.

ಅರ್ಜಿದಾರರು ಶಿವಮೊಗ್ಗ ನಗರ ಪ್ರದೇಶದಲ್ಲಿ ವಾಸವಿರಬೇಕು. ಬಿಪಿಎಲ್ / ಅಂತ್ಯೋದಯ ಪಡಿತರ ಚೀಟಿಯನ್ನು ಹೊಂದಿರಬೇಕು. ಸ್ವಂತ ನಿವೇಶನ, ಮನೆಯನ್ನು ಹೊಂದಿರಬಾರದು. ಬೇರೆ ಯಾವುದೇ ಯೋಜನೆಯಡಿ ನಿವೇಶನ / ವಸತಿ ಸೌಲಭ್ಯ ಪಡೆದಿರಬಾರದು.

ಯಾವುದಾದರೂ ಯೋಜನೆಯಡಿ ಅರ್ಜಿ ಸಲ್ಲಿಸಿದ್ದರೆ ವಿವರ ನೀಡಬೇಕು. ಅರ್ಜಿದಾರರ ಹೆಸರಿನಲ್ಲಿ ಇರುವ ಇತ್ತೀಚಿನ ವಾರ್ಷಿಕ ಆದಾಯ ಪ್ರಮಾಣ ಪತ್ರ (ರೂ.86,700 ಗಳಿಗಿಂತ ಕಡಿಮೆ ಆದಾಯ) ಹೊಂದಿರಬೇಕು. ತೃತೀಯ ಲಿಂಗಿಗಳು (ಟ್ರಾನ್ಸ್ ಜೆಂಡರ್) ಸಹ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಯಾರು ಎಷ್ಟು ಹಣ ಪಾವತಿಸಬೇಕು?

» ಸಾಮಾನ್ಯ ಪ್ರವರ್ಗ 1, 2(ಎ), 2(ಬಿ), 3(ಎ), 3(ಬಿ) ಗೆ ಸೇರಿದವರಿಗೆ 200 ರೂ. ಅರ್ಜಿ ಶುಲ್ಕ, 8000 ರೂ. ಇಎಂಡಿ ಸೇರಿ ಒಟ್ಟು ರೂ.8200 ಪಾವತಿಸಬೇಕು.

» ಪ.ಜಾತಿ/ಪ.ಪಂಗಡಕ್ಕೆ ಸೇರಿದವರಿಗೆ 100 ರೂ. ಅರ್ಜಿ ಶುಲ್ಕ, 5000 ರೂ.ಇಎಂಡಿ ಸೇರಿ 5100 ರೂ. ವನ್ನು ಪಾವತಿಸಬೇಕು.

» ಶಿವಮೊಗ್ಗ ಕೆನರಾ ಬ್ಯಾಂಕ್ ಎಲ್ಲಾ ಶಾಖೆಗಳಲ್ಲಿ/ಬ್ಯಾಂಕ್ ಆಫ್ ಬರೋಡ ಬ್ಯಾಂಕ್‍ನ ಎಸ್.ಆರ್. ಶಾಖೆಗಳಲ್ಲಿ/ಇಂಡಿಯನ್ ಬ್ಯಾಂಕ್‍ನ ಪಾಲಿಕೆ ಶಾಖೆ ಹಾಗೂ ಶಿವಮೊಗ್ಗ ಒನ್ ಕೇಂದ್ರಗಳಲ್ಲಿ ನಗದು ಅಥವಾ ಡೆಬಿಟ್ ಕಾರ್ಡ್‍ನ ಮೂಲಕ ಪಾವತಿಸಬಹುದು.

» ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ನಂತರ ಕಂಪ್ಯೂಟರ್ ಜನರೇಟೆಡ್ ಚಲನ್‍ನೊಂದಿಗೆ ಅಧಿಸೂಚನೆಯಲ್ಲಿ ಸೂಚಿಸಿದ ಬ್ಯಾಂಕ್ ಅಥವಾ ಶಿವಮೊಗ್ಗ ಒನ್ ಕೇಂದ್ರಗಳಲ್ಲಿ ನಗದನ್ನು ಪಾವತಿಸಿ ಸ್ವೀಕೃತಿ ಅಥವಾ ರಶೀದಿ ಪಡೆದ ನಂತರ ಅರ್ಜಿ ಪ್ರಕ್ರಿಯೆ ಪೂರ್ಣಗೊಳ್ಳುವುದು.

Shimoga Nanjappa Hospital Covid care center

ಮೀಸಲಾತಿ, ದಾಖಲೆ ವಿವರ

ಪರಿಶಿಷ್ಟ ಜಾತಿ ಶೇ.30, ಪರಿಶಿಷ್ಟ ಪಂಗಡ ಶೇ.10, ಅಲ್ಪಸಂಖ್ಯಾತರು ಶೇ.10, ಸಾಮಾನ್ಯ ವರ್ಗ ಶೇ.50 ಇದ್ದು ಅರ್ಜಿದಾರರ ಇತ್ತೀಚಿನ 01 ಪಾಸ್‍ಪೋರ್ಟ್ ಸೈಜಿನ ಭಾವಚಿತ್ರ, ಆಧಾರ್ ಕಾರ್ಡ್, ಬಿಪಿಎಲ್ ಪಡಿತರ ಚೀಟಿ ಪ.ಜಾತಿ/ಪ.ಪಂ/ವಿಕಲಚೇತನ/ಹಿರಿಯ ನಾಗರೀಕ/ಮಾಜಿ ಸೈನಿಕರು/ಸೈನಿಕರ ವಿಧವೆಯರು/ವಿಧುರರು/ ಸ್ವತಂತ್ರ ಯೋಧರು ಸಕ್ಷಮ ಪ್ರಾಧಿಕಾರದಿಂದ ಪಡೆದಂತಹ ಪ್ರಮಾಣ ಪತ್ರ ಹೊಂದಿರಬೇಕು. ಅರ್ಜಿದಾರರ ಚಾಲ್ತಿಯಲ್ಲಿರುವ ಬ್ಯಾಂಕ್ ಪಾಸ್‍ಪುಸ್ತಕ, ವಾರ್ಷಿಕ ಆದಾಯ ಪ್ರಮಾಣ ಪತ್ರ (ಲಭ್ಯವಿದ್ದಲ್ಲಿ) ಹೊಂದಿರಬೇಕು.

ಎಲ್ಲ ಮೂಲ ದಾಖಲಾತಿ ಹಾಗೂ ದಾಖಲಾತಿಗಳ ಸಂಖ್ಯೆಯನ್ನು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವ ವೇಳೆ ಸಲ್ಲಿಸಬೇಕು. ಅಪೂರ್ಣ ಮತ್ತು ತಪ್ಪು ಮಾಹಿತಿ ನೀಡಿದಲ್ಲಿ ಅರ್ಜಿದಾರರಿಗೆ ಯಾವುದೇ ತಿಳುವಳಿಕೆ ನೀಡದೇ ಅರ್ಜಿ ತಿರಸ್ಕರಿಸಲಾಗುವುದು ಎಂದು ನಗರ ಆಶ್ರಯ ಸಮಿತಿ ಅಧ್ಯಕ್ಷರು ಹಾಗೂ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಇದನ್ನೂ ಓದಿ | ಆಶ್ರಯ ಮನೆಗಳ ವಂತಿಗೆ ಪಾವತಿಗೆ ಕೊನೆ ದಿನಾಂಕ ಫಿಕ್ಸ್, ಇಲ್ಲವಾದಲ್ಲಿ ನೂತನ ಫಾಲನುಭವಿಗಳಿಗೆ ಚಾನ್ಸ್

Shimoga Live Age Wise Reach graphics

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment