ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 MARCH 2023
BENGALURU : ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿ, ಶಿವಮೊಗ್ಗದ ಅಭ್ಯರ್ಥಿಯಾಗಲಿದ್ದಾರೆ ಎಂಬ ಚರ್ಚೆ ಮುನ್ನಲೆಗೆ ಬಂದಿದೆ. ಚರ್ಚೆ ದಟ್ಟವಾಗುತ್ತಿದ್ದಂತೆ ಶಿವಮೊಗ್ಗದ ಕಾಂಗ್ರೆಸ್ ಮುಖಂಡರು (Aspirants) ಬೆಂಗಳೂರಿಗೆ ದೌಡಾಯಿಸಿದ್ದಾರೆ.

ಯಾರೆಲ್ಲ ಹೋಗಿದ್ದಾರೆ?
ವಿಧಾನ ಸಭೆ ಚುನಾವಣೆಯ 11 ಆಕಾಂಕ್ಷಿಗಳು (Aspirants), ಮಹಾನಗರ ಪಾಲಿಕೆ ಸದಸ್ಯರು, ನಗರದ ನಾಯಕರು, ಪಕ್ಷದ ವಿವಿಧ ಜವಾಬ್ದಾರಿಯಲ್ಲಿರುವವರು ಬೆಂಗಳೂರಿಗೆ ತೆರಳಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಅಲ್ಲದೆ ತಮ್ಮ ಮನವಿ ಸಲ್ಲಿಸಿದ್ದಾರೆ.
ಕೈ ನಾಯಕರ ಮನವಿ ಏನು?
ಶಿವಮೊಗ್ಗ ವಿಧಾನಸಭೆಗೆ ಕಾಂಗ್ರೆಸ್ ಪಕ್ಷದಿಂದ 11 ಆಕಾಂಕ್ಷಿಗಳಿದ್ದಾರೆ. ಈ ಪೈಕಿ ಯಾರಿಗಾದರೂ ಟಿಕೆಟ್ ಕೊಡಿ. ಎಲ್ಲರು ಒಗ್ಗಟ್ಟಿನಿಂದ ಚುನಾವಣಾ ಕೆಲಸ ಮಾಡುತ್ತೇವೆ ಎಂದು ಶಿವಮೊಗ್ಗದ ಕೈ ನಾಯಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ – ಕಾಂಗ್ರೆಸ್ ಸೇರ್ತಾರಾ ಆಯನೂರು ಮಂಜುನಾಥ್, ಕುತೂಹಲ ಮೂಡಿಸಿದೆ ಶಿವಮೊಗ್ಗ ವಾರ್ಡ್ ಅಧ್ಯಕ್ಷರುಗಳ ನಡೆ
ಕೆಪಿಸಿಸಿ ಅಧ್ಯಕ್ಷರು, ಮಾಜಿ ಸಿಎಂ ಹೇಳಿದ್ದೇನು?
ಶಿವಮೊಗ್ಗದ ನಾಯಕರ ಮನವಿ ಆಲಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದು ಬಂದಿದೆ. ಕ್ಷೇತ್ರಕ್ಕೆ ಹೋಗಿ ಚುನಾವಣೆ ಕೆಲಸ ಮಾಡಿ ಎಂದು ತಿಳಿಸಿದ್ದಾರೆ ಎಂದು ಗೊತ್ತಾಗಿದೆ.
ಇದನ್ನೂ ಓದಿ – ಮಲವಗೊಪ್ಪದಲ್ಲಿ ಹೆದ್ದಾರಿ ಮೇಲೆ ಟೈರ್ ಗೆ ಬೆಂಕಿ, ಗಾಡಿಕೊಪ್ಪದಲ್ಲಿ ಚುನಾವಣೆ ಬಹಿಷ್ಕಾರದ ಎಚ್ಚರಿಕೆ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



