ಕೊಟ್ಟ ಸಾಲದ ಹಣ ಮರಳಿ ಕೇಳಿದ್ದಕ್ಕೆ ಕಾರಿನಲ್ಲಿ ಕರೆದೊಯ್ದು ಮುಖಕ್ಕೆ ಗುದ್ದಿ ಹಲ್ಲೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 29 MAY 2023

SHIMOGA : ಕೊಟ್ಟ ಸಾಲದ ಹಣ (Money) ಮರಳಿ ಕೇಳಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಕಾರಿನಲ್ಲಿ ಕೂರಿಸಿಕೊಂಡು ವಿವಿಧೆಡೆ ಕರೆದೊಯ್ದು ಮುಖಕ್ಕೆ ಗುದ್ದಿ ಹಲ್ಲೆ ನಡೆಸಲಾಗಿದೆ. ಸೋಮಿನಕೊಪ್ಪದ ಇಮ್ರಾನ್‌ ಎಂಬುವವರ ಮೇಲೆ ಹಲ್ಲೆಯಾಗಿದ್ದು, ಮೆಟ್ರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಗೋವಿಂದ ಎಂಬಾತನು ಸೇರಿ ನಾಲ್ವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Crime-News-General-Image

ಗೋವಿಂದ ಎಂಬಾತನಿಗೆ ಸಾಲ (Money) ನೀಡಿದ್ದ ಇಮ್ರಾನ್‌ ಹಣ ಹಿಂತಿರುಗಿಸುವಂತೆ ಕೇಳಿದ್ದರು. ಹಣ ಕೊಡುವುದಾಗಿ ಫೋನ್‌ ಮಾಡಿದ್ದ ಆತ ಶಿವಮೊಗ್ಗದ ಬಾರ್‌ ಒಂದರ ಬಳಿ ಬರುವಂತೆ ತಿಳಿಸಿದ್ದ. ಅಂತಿಯೇ ಇಮ್ರಾನ್ ಬಂದಿದ್ದು, ಗೋವಿಂದನೂ ತನ್ನ ಸ್ನೇಹಿತರೊಂದಿಗೆ ಕಾರಿನಲ್ಲಿ ಬಂದಿದ್ದ. ಕಾರಿನಲ್ಲಿದ್ದವರು ಬಲವಂತವಾಗಿ ಇಮ್ರಾನ್‌ನನ್ನು ಹತ್ತಿಸಿಕೊಂಡು ಹೊಳೆಬೆನವಳ್ಳಿ ಕ್ರಾಸ್‌ವರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಇಮ್ರಾನ್‌ ಮುಖಕ್ಕೆ ಗುದ್ದಿ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ – ಬೈಪಾಸ್‌ ರಸ್ತೆಯಲ್ಲಿ ಹಿಟ್‌ ಅಂಡ್‌ ರನ್‌ ಅಪಘಾತ, ತಪ್ಪಿದ ಭಾರಿ ಅನಾಹುತ, ಕ್ಯಾಮರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ರಾತ್ರಿ 10.30ರ ಹೊತ್ತಿಗೆ ಇಮ್ರಾನ್‌ ಸಹೋದರನಿಗೆ ಕರೆ ಮಾಡಿ ಇಮ್ರಾನ್‌ನನ್ನು ಕರೆದೊಯ್ಯುವಂತೆ ಆರೋಪಿಗಳು ತಿಳಿಸಿದ್ದಾರೆ. ಬಿ.ಹೆಚ್‌.ರಸ್ತೆಯ ಬಾರ್‌ ಬಳಿ ಇಮ್ರಾನ್‌ನನ್ನು ಬಿಟ್ಟಿದ್ದಾರೆ. ಮೆಟ್ರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಇಮ್ರಾನ್‌, ಕೋಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 29, 2023

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

Leave a Comment