BREAKING NEWS | ಶಿವಮೊಗ್ಗದಲ್ಲಿ ವ್ಯಕ್ತಿಗೆ ಚಾಕು ಇರಿತ

 SHIVAMOGGA LIVE NEWS 

ಶಿವಮೊಗ್ಗ| ನಗರದಲ್ಲಿ ವ್ಯಕ್ತಿಯೊಬ್ಬರಿಗೆ ಚಾಕು ಇರಿಯಲಾಗಿದೆ. ಗಾಯಗೊಂಡಿರುವ ಆತನನ್ನು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Shimoga Nanjappa Hospital

ಪ್ರೇಮ್ ಸಿಂಗ್ ಎಂಬಾತನಿಗೆ ಚಾಕು ಇರಿಯಲಾಗಿದೆ. ನಗರ ಉಪ್ಪಾರಕೇರಿಯಲ್ಲಿ ಘಟನೆ ಸಂಭವಿಸಿದೆ. ಗಾಯಾಳುವನ್ನು ಕೂಡಲೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಚಾರ ತಿಳಯುತ್ತಿದ್ದ ಹಾಗೆ ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ಭೇಟಿ ನೀಡಿದರು.

Kalleshwara-Enterprises.webp

ಈ ವೇಳೆ ಮಾತನಾಡಿದ ಮಹಾನಗರ ಪಾಲಿಕೆ ಸದಸ್ಯ ಚನ್ನಬಸಪ್ಪ, ಎ.ಎ ಸರ್ಕಲ್‌ನಲ್ಲಿ ಗಲಾಟೆಯಾದ ಹಿನ್ನೆಲೆ ಅಂಗಡಿಗಳನ್ನು ಪೊಲೀಸರು ಬಂದ್ ಮಾಡಿಸಿದರು. ಎಂಕೆಕೆ ರಸ್ತೆಯ ಸಿಲ್ಕ್ ಅಂಗಡಿಯಲ್ಲಿ ಪ್ರೇಮ್ ಸಿಂಗ್ ಕೆಲಸ ಮಾಡುತ್ತಿದ್ದ. ಅಂಗಡಿ ಬಾಗಿಲು ಹಾಕಿಸಿದ್ದರಿಂದ ಸ್ನೇಹಿತನ ಜೊತೆಗೆ ಒಟ್ಟಿಗೆ ಮನೆ ಕಡೆಗೆ ಹೋಗುತ್ತಿದ್ದಾಗ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದು ಉದ್ದೇಶಪೂರ್ವಕವಾಗಿ ನಡೆದ ದಾಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

Shimoga Nanjappa Hospital

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment