ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SHIMOGA | 12 ಜುಲೈ 2022
ಶಿವಮೊಗ್ಗದಲ್ಲಿ ಬಜರಂಗದಳ ( BAJARANGADAL ) ಕಾರ್ಯಕರ್ತನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ( ASSAULT ) ನಡೆಸಲಾಗಿದೆ. ಆತನನ್ನು ಮೆಗ್ಗಾನ್ ಅಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು, ಈ ಬೆಳವಣಿಗೆ ಹಿಂದೂ ( HINDU ) ಪರ ಸಂಘಟನೆಗಳ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಬಜರಂಗದಳ ಕಾರ್ಯಕರ್ತ ಕಾಂತರಾಜು ಎಂಬಾತನ ಮೇಲೆ ಹಲ್ಲೆಯಾಗಿದೆ. ಶಿವಮೊಗ್ಗದ ರಾಜೀವ್ ಗಾಂಧಿ ಬಡಾವಣೆಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ.
ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ
ರಾಜೀವ್ ಗಾಂಧಿ ಬಡಾವಣೆಯ ಕಾಂತರಾಜು ಮನೆ ಬಳಿ ದಾಳಿಯಾಗಿದೆ. ರಾತ್ರಿ 10.30ರ ಹೊತ್ತಿಗೆ ಕಾಂತರಾಜು ಊಟ ಮುಗಿಸಿ ಮನೆಯಿಂದ ಹೊರ ಬಂದ ವೇಳೆ, ಏಕಾಏಕಿ ದಾಳಿ ನಡೆಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹಲ್ಲೆಯಾದ ಕೂಡಲೆ ಕಾಂತರಾಜುನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
‘ಊಟ ಮುಗಿಸಿ ಮೂತ್ರ ವಿಸರ್ಜನೆಗೆ ಎಂದು ಮನೆಯಿಂದ ಹೊರಗೆ ಬಂದಿದ್ದೆ. ಈ ವೇಳೆ ಮಚ್ಚಿನಿಂದ ದಾಳಿ ಮಾಡಿದರು. ಕೈಗೆ, ಬೆನ್ನಿನ ಮೇಲೆ ದಾಳಿ ಮಾಡಿದ್ದಾರೆ. ಅಷ್ಟು ಹೊತ್ತಿಗೆ ನಾನು ಮಚ್ಚು ಕಸಿದುಕೊಂಡು ಮನೆಯ ಒಳಗೆ ಓಡಿ ಹೋಗಿ ಬಾಗಿಲು ಹಾಕಿಕೊಂಡೆ. ಬಲಗೈನ ಎರಡು ಕಡೆ ಮಚ್ಚಿನ ಏಟು ಬಿದ್ದಿದೆ’ ಎಂದು ಕಾಂತರಾಜು ತಿಳಿಸಿದ್ದಾರೆ.
ಪರಿಚಿತರಿಂದಲೇ ನಡೆಯಿತು ದಾಳಿ
ಕಾಂತರಾಜು ಮೇಲೆ ಪರಿಚಿತರಿಂದಲೆ ಮಾರಣಾಂತಿಕ ದಾಳಿಯಾಗಿದೆ. ದಾಳಿಕೋರರು ಕೂಡ ರಾಜೀವ್ ಗಾಂಧಿ ಬಡಾವಣೆಯ ನಿವಾಸಿಗಳು ಎಂದು ತಿಳಿದು ಬಂದಿದೆ.
‘ಹಳೆ ದ್ವೇಷದ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ ಎಂದು ಅನುಮಾನವಿದೆ. ಹರ್ಷ ಹತ್ಯೆ ಪ್ರಕರಣದ ಸಂದರ್ಭದ ಜಗಳ, ಬಿಜೆಪಿ ವಿಚಾರವಾಗಿ ಹೆಚ್ಚು ಓಡಾಡುತ್ತಾನೆ ಎಂದು ದಾಳಿ ಮಾಡಿದ್ದಾರೆ. ಮಚ್ಚುಗಳನ್ನು ಹಿಡಿದುಕೊಂಡು ಬಂದಿದ್ದರು. ಹಿಂದುತ್ವದ ವಿಚಾರವಾಗಿ ಹೊಡೆಯಬೇಕು ಎಂದು ಇತ್ತು ಅವರಿಗೆ. ಒಂದು ವಾರದಿಂದ ಪ್ಲಾನ್ ಮಾಡಿಕೊಂಡು ಹಲ್ಲೆ ನಡೆಸಿದ್ದಾರೆ. ನಮ್ಮ ಹುಡುಗರಿಗೂ ಹೊಡೆಯುತ್ತೇವೆ ಎಂದು ಹೇಳಿದ್ದಾರೆ’ ಎಂದು ಕಾಂತರಾಜು ತಿಳಿಸಿದ್ದಾರೆ.
ಹಿಂದೂ ಸಂಘಟನೆ ಕಾರ್ಯಕರ್ತ ಆಕ್ರೋಶ
ಕಾಂತರಾಜು ಮೇಲಿನ ಹಲ್ಲೆ ವಿಚಾರ ತಿಳಿಯುತ್ತಿದ್ದ ಹಾಗೆ ಬಜರಂಗದಳ ಸೇರಿದಂತೆ ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮತ್ತು ಹಿಂದೂ ಪರ ಸಂಘಟನೆ ಮುಖಂಡರು, ಕಾರ್ಯಕರ್ತರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಕಾಂತರಾಜು ಆರೋಗ್ಯ ವಿಚಾರಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಎಸ್.ದತ್ತಾತ್ರಿ ಸೇರಿದಂತೆ ಹಲವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಇನ್ನು, ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ವಿಡಿಯೋ ಕಾಲ್ ಮೂಲಕ ಕಾಂತರಾಜು ಜೊತೆಗೆ ಮಾತನಾಡಿ, ಆರೋಗ್ಯ ವಿಚಾರಿಸಿದ್ದಾರೆ.
ಹಿಂದೂ ಮುಖಂಡರ ಆಕ್ರೋಶ
ಕಾಂತರಾಜು ಮೇಲಿನ ಹಲ್ಲೆಗೆ ಹಿಂದೂ ಸಂಘಟನೆ ಕಾರ್ಯಕರ್ತರು, ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜು ಅವರು, ಕಾಂತರಾಜು ಪಕ್ಷದ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಹಿಂದು ಹರ್ಷ ಹತ್ಯೆ ಸಂದರ್ಭ ನಡೆದ ಘಟನೆಗಳನ್ನು ಆಧರಿಸಿ, ಪ್ರತಿಕಾರದ ಕ್ರಮಗಳನ್ನು ಗಮನಿಸಿ, ಮುಸಲ್ಮಾನ್ ಸಮಾಜದ ಕೆಲವು ಕಿಡಿಗೇಡಿಗಳು ಕಾಂತರಾಜು ಅವರನ್ನು ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಪ್ರಯತ್ನ ನಡೆದಿದೆ’ ಎಂದು ಆರೋಪಿಸಿದರು.
ಇದನ್ನೂ ಓದಿ – ಮಥುರಾ ಪ್ಯಾರಡೈಸ್ ಬಳಿ ಯುವತಿಯರನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ
‘ದೈಹಿಕವಾಗಿ ಸಶಕ್ತರಾಗಿದ್ದ ಕಾರಣ, ಧೈರ್ಯವಾಗಿ ಅದನ್ನು ಎದುರಿಸಿದ ಕಾರಣ ಕಾಂತರಾಜು ಅವರು ತೀವ್ರತರದ ಮಾರಣಾಂತಿಕ ಹಲ್ಲೆಗೆ ಒಳಗಾಗಿ ಪ್ರಾಣಪಾಯದಿಂದ ಪಾರಾಗಿರುವುದು ಭಗವಂತನ ಕೃಪೆ. ಆದರೆ ಇಂತಹ ಬೆದರಿಕೆಗಳಿಗೆ ಸಂಘ ಪರಿವಾರದ ಕಾರ್ಯಕರ್ತರು ಬೆದರುವುದಿಲ್ಲ’ ಎಂದು ತಿಳಿಸಿದರು.
ಮೂವರು ಪೊಲೀಸರ ವಶಕ್ಕೆ
ಘಟನೆ ಬೆನ್ನಿಗೆ ಶಿವಮೊಗ್ಗ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಅವರ ವಿಚಾರಣೆ ನಡೆಸಲಾಗುತ್ತಿದೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರು, ಮಚ್ಚಿನಿಂದ ಹಲ್ಲೆಯಾಗಿದೆ. ಮೂರರಿಂದ ಐವರು ಮಂದಿ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಮೂವರನ್ನು ಈಗಾಗಲೆ ವಶಕ್ಕೆ ಪಡೆದಿದ್ದೇವೆ. ತನಿಖೆ ನಡೆಯುತ್ತಿದೆ. ಆರಂಭದಲ್ಲಿ ದುಡ್ಡಿನ ವಿಚಾರ ಎಂದು ಹೇಳಿದ್ದರು. ಆದರೆ ತನಿಖೆ ಪ್ರಕಾರ ಬಜರಂಗದಳ ಸಂಘಟನೆ ಚಟುವಟಿಕೆಯಲ್ಲಿ ಇದ್ದಿದ್ದರಿಂದ ಈ ಹಲ್ಲೆಯಾಗಿದೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ ಎಂದು ತಿಳಿಸಿದರು.
ಶಿವಮೊಗ್ಗದಲ್ಲಿ ಪದೇ ಪದೆ ಇಂತಹ ಬೆಳವಣಿಗೆ ನಡೆಯುತ್ತಿದೆ. ಇದರ ವಿರುದ್ಧವು ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.
‘ಶಿವಮೊಗ್ಗದಲ್ಲಿ ಪದೇ ಪದೆ ಇಂತಹ ಘಟನೆಗಳು ನಡೆಯುತ್ತಿವೆ. ಆದ್ದರಿಂದ ನಮ್ಮ ಪ್ಯಾಟ್ರೋಲಿಂಗ್ ಹೆಚ್ಚಳ ಮಾಡಿದ್ದೇವೆ. ಅಲ್ಲಲ್ಲಿ ಚೆಕ್ ಪೋಸ್ಟ್ ಹಾಕಲಾಗಿದೆ. ಸಮಸ್ಯೆ ಉಂಟು ಮಾಡುವವರ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನಿಗಾ ವಹಿಸಲಾಗುತ್ತದೆ.’ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ತಿಳಿಸಿದ್ದಾರೆ.
ಇದನ್ನೂ ಓದಿ – ಮಗನ ಮೇಲೆ ಹಲ್ಲೆ ಮಾಡಿದ್ದನ್ನು ಪ್ರಶ್ನಿಸಿದ ಆಟೋ ಚಾಲಕನಿಗೆ ಚಾಕು ಇರಿತ, ಸಾವು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422