ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021
ಸೊಪ್ಪಿನ ರೇಟಿನ ವಿಚಾರವಾಗಿ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಶಿವಮೊಗ್ಗದ ತಿಲಕ ನಗರದಲ್ಲಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಸೊಪ್ಪು ಮಾರಾಟಗಾರನಿಗೆ ಗಾಯವಾಗಿದ್ದು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಸೊಪ್ಪು ಮಾರಾಟ ಮಾಡುತ್ತಿದ್ದ ಚಿಕ್ಕಲ್’ನ ಭರತ್ ಕುಮಾರ್ ಗಾಯಗೊಂಡಿದ್ದಾರೆ. ಸೊಪ್ಪು ಕೊಳ್ಳಲು ಬಂದ ಮಹಿಳೆ ಮತ್ತು ಅವರ ಪುತ್ರನ ವಿರುದ್ಧ ದೂರು ದಾಖಲಾಗಿದೆ.
ಸೊಪ್ಪಿನ ರೇಟಿನ ವಿಚಾರಕ್ಕೆ ಕಿರಿಕ್
ಭರತ್ ಕುಮಾರ್ ಅವರು ಸೊಪ್ಪು ಮಾರಾಟ ಮಾಡುತ್ತ ತಿಲಕನಗರಕ್ಕೆ ಬಂದಿದ್ದರು. ಮಹಿಳೆಯೊಬ್ಬರು ಸೊಪ್ಪು ಕೊಳ್ಳಲು ಬಂದಿದ್ದಾರೆ. ರೇಟ್ ವಿಚಾರಿಸಿದ್ದು ದುಬಾರಿಯ ಆಯಿತೆಂದು ಮಾತಿನ ಚಕಮಕಿ ನಡೆದಿದೆ. ಈ ವೇಳೆ ಮನೆಯ ಒಳಗಿಂದ ಬಂದ ಮಹಿಳೆಯ ಮಗ ಸೊಪ್ಪು ವ್ಯಾಪಾರಿ ಭರತ್ ಕುಮಾರ್’ಗೆ ಥಳಿಸಿದ್ದಾನೆ. ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡಿದ್ದಾನೆ ಎಂದು ಭರತ್ ದೂರಿನಲ್ಲಿ ತಿಳಿಸಿದ್ದಾರೆ.
ಸ್ಥಳೀಯರು ಜಗಳ ಬಿಡಿಸಿದ್ದು, ಗಾಯಗೊಂಡಿದ್ದ ಭರತ್ ಕುಮಾರ್ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಕಿತ್ಸೆ ಪಡೆದುಕೊಂಡಿದ್ದಾರೆ. ಬಳಿಕ ಜಯನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು













