ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 4 DECEMBER 2024
ಶಿವಮೊಗ್ಗ : ದೇಶಿಯ ವಿದ್ಯಾ ಶಾಲಾ ಸಮಿತಿ ಹಾಗೂ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಸಂಯುಕ್ತಾಶ್ರಯದಲ್ಲಿ ಡಿ.4ರಿಂದ ಡಿ.6ರವರೆಗೆ ಮೂರು ದಿನಗಳ ಕಾಲ 37ನೇ ಕುವೆಂಪು ವಿಶ್ವವಿದ್ಯಾಲಯ ಅಂತರ ಕಾಲೇಜು ಅಥ್ಲೆಟಿಕ್ (Athletic) ಕ್ರೀಡಾ ಕೂಟ ಆಯೋಜಿಸಲಾಗಿದೆ. ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿರುವ ಅಥ್ಲೆಟಿಕ್ಸ್ನಲ್ಲಿ ಕುವೆಂಪು ವಿವಿ ವ್ಯಾಪ್ತಿಯ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಒಟ್ಟು 15 ಕಾಲೇಜುಗಳ ಸುಮಾರು 712 ಕ್ರೀಡಾಕೂಟಗಳು ಭಾಗವಹಿಸುತ್ತಿದ್ದಾರೆ ಎಂದು ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ತಿಳಿಸಿದರು.ಶಿವಮೊಗ್ಗದಲ್ಲಿ ಅಥ್ಲೆಟಿಕ್ಸ್ ಕ್ರೀಡಾಕೂಟ
ಶಿವಮೊಗ್ಗ : ಜಿಲ್ಲಾಡಳಿತದ ವತಿಯಿಂದ ಡಾ. ಅಂಬೇಡ್ಕರ್ ಭವನದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿಧಾನಪ ಪರಿಷತ್ ಸದಸ್ಯೆ ಬಲ್ಕಿಷ್ ಬಾನು ಉದ್ಘಾಟಿಸಿದರು. ಗರ್ಭ ಧರಿಸಿದ ತಾಯಂದಿರು ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಬೇಕು. ಆಗ ಹುಟ್ಟಿನಿಂದ ಸಂಭವಿಸಬಹುದಾದ ವಿಕಲಾಂಗತೆಯನ್ನು ತಡೆಯಬಹುದ ಬಲ್ಕಿಷ್ ಬಾನು, ವಿಧಾನ ಪರಿಷತ್ ಸದಸ್ಯೆ ಜಿಲ್ಲೆಯಲ್ಲಿ 21,694 ವಿಶೇಷ ಚೇತನರಿದ್ದಾರೆ. ಅವರಿಗೆ ತ್ರಿಚಕ್ರ ವಾಹನ ಸೇರಿ ವಿವಿಧ ಸೌಲಭ್ಯ ಒದಗಿಸಲಾಗುತ್ತಿದೆ. ಬಿ.ಹೆಚ್.ಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಶಿವಮೊಗ್ಗದಲ್ಲಿ ವಿಕಲಚೇತನರ ದಿನಾಚರಣೆ
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆಯಾಗುತ್ತಾ? ಇಲ್ಲಿದೆ ರಿಪೋರ್ಟ್
ಶಿವಮೊಗ್ಗ : ಕರ್ನಾಟಕ ಕಟ್ಟಡ ಕಾರ್ಮಿಕರ ಮತ್ತು ಅಸಂಘಟಿತ ಕಾರ್ಮಿಕರ ಹಿತರಕ್ಷಣಾ ವೇದಿಕೆಯ ಜಿಲ್ಲಾ ಚಾಲಕರ ಕಾರ್ಮಿಕರ ಘಟಕದ ವತಿಯಿಂದ ಚಾಲಕರಿಗೆ ಉಚಿತವಾಗಿ ಚಾಲಕರ ಲೇಬರ್ ಕಾರ್ಡ್ ವಿತರಿಸಲಾಗುತ್ತದೆ. ಡಿ.5 ಮತ್ತು ಡಿ.6ರಂದು ಬೆಳಿಗ್ಗೆ 10.30ರಿಂದ ಸಂಜೆ 6ರವರೆಗೆ ದುರ್ಗಿಗುಡಿ 2ನೇ ತಿರುವಿನಲ್ಲಿರುವ ಕಚೇರಿಯಲ್ಲಿ ಕಾರ್ಡ್ ವಿತರಿಸಲಾಗುತ್ತದೆ ಎಂದು ವೇದಿಕೆಯ ರಾಜ್ಯಾಧ್ಯಕ್ಷ ಸತೀಶ್.ಹೆಚ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಚಾಲಕರಿಗೆ ಉಚಿತವಾಗಿ ಲೇಬರ್ ಕಾರ್ಡ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422