ಬೈಕ್‌ ಹಾರನ್‌ ಮಾಡಿದ್ದಕ್ಕೆ ಫಾಲೋ ಮಾಡಿಕೊಂಡು ಬಂದು ಮಾರಕಾಸ್ತ್ರದಿಂದ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 OCTOBER 2023

SHIMOGA : ಬೈಕ್‌ ಹಾರನ್‌ (Horn) ಮಾಡಿದ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಲಾಗಿದೆ. ನವುಲೆ ಕೆರೆ ಬಳಿ ದಾಳಿಯಾಗಿದೆ. ಬೈಕಿನಲ್ಲಿ ಬಂದ ಅಪರಿಚಿತರು ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಏನಿದು ಪ್ರಕರಣ?

ವೆಂಕಟಾಪುರದ ಬಸ್‌ ಚಾಲಕ ಮಂಜುನಾಥ್‌ ಹೊಟೇಲ್‌ನಲ್ಲಿ ಊಟ ಮುಗಿಸಿ ತಮ್ಮ ಚಿಕ್ಕಪ್ಪನ ಮಗನೊಂದಿಗೆ ರಾತ್ರಿ 10 ಗಂಟೆ ಹೊತ್ತಿಗೆ ಬೈಕಿನಲ್ಲಿ ಮನೆಗೆ ತರಳುತ್ತಿದ್ದರು. ಮಥುರಾ ಪ್ಯಾರಡೈಸ್‌ ಸಮೀಪ ಯಮಹಾ ಬೈಕ್‌ ಒಂದರಲ್ಲಿ ಇಬ್ಬರು ಯುವಕರು ಅಡ್ಡಾದಿಡ್ಡಿ ಬೈಕ್‌ ಚಲಾಯಿಸುತ್ತಿದ್ದರು. ಹಾಗಾಗಿ, ಮಂಜುನಾಥ್‌ ಅವರು ದಾರಿಗಾಗಿ ಬೈಕ್‌ ಹಾರನ್‌ ಮಾಡಿದ್ದಾರೆ. ಇದರಿಂದ ಆಕ್ರೋಶಗೊಂಡ ಯಮಹಾ ಬೈಕಿನಲ್ಲಿದ್ದ ಯುವಕರು ಮಂಜುನಾಥ್‌ ಮತ್ತು ಅವರ ಚಿಕ್ಕಪ್ಪನ ಮಗನನ್ನು ಮಹಾವೀರ ಸರ್ಕಲ್‌ನಲ್ಲಿ ಅಡ್ಡಗಟಿ ಅವಾಚ್ಯವಾಗಿ ನಿಂದಿಸಿದ್ದಾರೆ.

ಸವಳಂಗ ರಸ್ತೆಯಲ್ಲಿ ತೆರಳುತ್ತಿದ್ದಾಗ ಕಮಲಾ ನರ್ಸಿಂಗ್‌ ಹೋಂ ಸಮೀಪ ಪುನಃ ಅಡ್ಡಗಟ್ಟಿ ನಿಂದಿಸಿದ್ದಾರೆ. ನವುಲೆ ಕೆರೆ ಬಳಿ ಮಾರಕಾಸ್ತ್ರದಿಂದ ಮಂಜುನಾಥ್‌ ಅವರ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿದ್ದ ಮಂಜುನಾಥ್‌ ಅವರನ್ನು ಅವರ ಚಿಕ್ಕಪ್ಪನ ಮಗ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡೆಸಿದ್ದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಗೋಮಾಂಸ ಮಾರಾಟ ಆರೋಪ, ಮನೆ ಮೇಲೆ ಪೊಲೀಸ್‌ ದಾಳಿ

ಕೊಲೆ ಮಾಡುವ ಉದ್ದೇಶದಿಂದ ಮಾರಕಾಸ್ತ್ರದಿಂದ ದಾಳಿ ನಡೆಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಇಬ್ಬರು ಅಪರಿಚಿತ ಯುವಕರ ವಿರುದ್ಧ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 21, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment