ಶಿವಮೊಗ್ಗದಲ್ಲಿ ಆಟೋ ಮೇಲೆ ದಾಳಿ, ಚಾಲಕನಿಗೆ ಹಲ್ಲೆ, ಈಶ್ವರಪ್ಪ ಕಾಲಿಗೆ ಬಿದ್ದು ರಕ್ಷಣೆ ಬೇಡಿದ ಡ್ರೈವರ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 MAY 2023

SHIMOGA : ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದ್ದೇನೆ ಎಂದಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ, ಆಟೋ (Auto) ಮೇಲೆ ದಾಳಿ ಮಾಡಲಾಗಿದೆ. ಶಿವಮೊಗ್ಗದ ಸೋಮಿನಕೊಪ್ಪದಲ್ಲಿ ಘಟನೆ ಸಂಭವಿಸಿದೆ. ಘಟನೆಯಿಂದ ವಿಚಲಿತನಾಗಿರುವ ಆಟೋ ಚಾಲಕ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕಾಲಿಗೆ ಬಿದ್ದು ರಕ್ಷಣೆಗೆ ಮೊರೆ ಇಟ್ಟಿದ್ದಾರೆ.

Auto-Glass-Break-Sominakoppa-in-Shimoga

ಏನಿದು ಪ್ರಕರಣ?

ಚಾಲಕ ಹರೀಶ್‌ ರಾವ್‌ ಎಂಬುವವರು ಆಟೋ (Auto) ಚಲಾಯಿಸಿಕೊಂಡು ಬರುತ್ತಿದ್ದ ವೇಲೆ ಮೂವರು ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ. ಚುನಾವಣೆಯಲ್ಲಿ ಯಾರಿಗೆ ಮತ ಹಾಕಿದೆ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಗೆ ವೋಟ್‌ ಮಾಡಿದ್ದೇನೆ ಎಂದು ಹರೀಶ್‌ ರಾವ್‌ ಹೇಳಿದ್ದಾರೆ. ಹಾಗಾಗಿ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಅಲ್ಲದೆ ಆಟೋದ ಗಾಜು ಒಡೆದು, ಟಾಪ್‌ಗೆ ಹಾನಿ ಮಾಡಿದ್ದಾರೆ ಎಂದು ಹರೀಶ್‌ ರಾವ್‌ ಆರೋಪಿಸಿದ್ದಾರೆ.

Eshwarappa and Auto Driver

ಈಶ್ವರಪ್ಪ ಕಾಲಿಗೆ ಬಿದ್ದ ಚಾಲಕ

ಘಟನೆ ಸಂಬಂಧ ದೂರು ನೀಡಲು ಹರೀಶ್‌ ರಾವ್‌ ತನ್ನ ಆಟೋದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಕಚೇರಿಗೆ ಬಂದಿದ್ದರು. ಇದೆ ವೇಳೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಜಿಲ್ಲಾ ರಕ್ಷಣಾಧಿಕಾರಿ ಕಚೇರಿಯಲ್ಲಿ ಆಟೋ ಚಾಲಕನಿಗೆ ಎದುರಾಗಿದ್ದಾರೆ. ಆಗ ತನ್ನ ಮೇಲಾದ ಹಲ್ಲೆಯ ಕುರಿತು ಆಟೋ ಚಾಲಕ ತಿಳಿಸಿದರು. ಅಲ್ಲದೆ ರಕ್ಷಣೆ ನೀಡುವಂತೆ ಮಾಜಿ ಸಚಿವ ಈಶ್ವರಪ್ಪ  ಅವರ ಕಾಲಿಗೆ ಬಿದ್ದರು.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ಸೂಕ್ತ ತನಿಖೆ, ರಕ್ಷಣೆಗೆ ಒತ್ತಾಯ

ಆಟೋ ಚಾಲಕ ಹರೀಶ್‌ ರಾವ್‌ ಅವರ ಮೇಲಿನ ಹಲ್ಲೆ ಕುರಿತು ಸೂಕ್ತ ತನಿಖೆ ನಡೆಸಬೇಕು. ಅವರಿಗೆ ರಕ್ಷಣೆ ಒದಗಿಸುವಂತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರಿಗೆ ಸೂಚಿಸಿದರು. ಅಲ್ಲದೆ ಈಶ್ವರಪ್ಪ ಆಟೋ ಚಾಲಕನಿಗೆ 20 ಸಾವಿರ ರೂ. ನೆರವು ನೀಡಿದರು. ‌

ಇದನ್ನೂ ಓದಿ – ಶಿವಮೊಗ್ಗದ 7 ಕ್ಷೇತ್ರದ ಚುನಾವಣೆ ಫಲಿತಾಂಶ, ತಿಳಿಯಬೇಕಾದ 5 ವಿಚಾರಗಳು ಇಲ್ಲಿವೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 15, 2023

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment