ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 APRIL 2024
SHIMOGA : ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪರ ಪ್ರಚಾರಕ್ಕೆ ಜನರ ಸಂಯೋಜನೆ ವೇಳೆ ಮಹಿಳೆ ಮೇಲೆ ಹಲ್ಲೆಯಾಗಿದೆ. ಸವರ್‌ಲೈನ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಮಾರಿಕಾಂಬ ಟ್ರಸ್ಟ್ ಸಂಯೋಜಕಿ ಪೂರ್ಣಿಮಾ ಎಂಬುವವರ ಮೇಲೆ ಹಲ್ಲೆಯಾಗಿದೆ. ಏ.20ರಂದು ಸವರ್‌ಲೈನ್ ರಸ್ತೆಯಲ್ಲಿ ಮನೆ ಮನೆಗೆ ತೆರಳಿ ಪೂರ್ಣಿಮಾ ಜನರನ್ನು ಸಂಯೋಜಿಸುತ್ತಿದ್ದರು. ಈ ಸಂದರ್ಭ ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷರು ಪೂರ್ಣಿಮಾ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈಶ್ವರಪ್ಪ ಪರ ಪ್ರಚಾರ ನಡೆಸದಂತೆ ಆಗ್ರಹಿಸಿ ಅಶ್ಲೀಲವಾಗಿ ಬೈದಿದ್ದಾರೆ ಎಂದು ಆರೋಪಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಕಲ್ಲಿಹಾಳ್‌ನಲ್ಲಿ ವಿಜಯೇಂದ್ರ ವಿರುದ್ಧ ಮರಾಠ ಸಮಾಜದ ಪ್ರತಿಭಟನೆ, ಕ್ಷಮೆಗೆ ಆಗ್ರಹ
LATEST NEWS
- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

- ಸಚಿವ ಮಧು ಬಂಗಾರಪ್ಪ ಜನ್ಮದಿನ, ವಿದ್ಯಾರ್ಥಿಗಳು, ಪೌರ ಕಾರ್ಮಿಕರಿಗೆ ವಿಮಾನಯಾನ

About The Editor
ನಿತಿನ್ ಆರ್.ಕೈದೊಟ್ಲು






