ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 ಮಾರ್ಚ್ 2022
ಕ್ಷುಲಕ ವಿಚಾರಕ್ಕೆ ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಲಾಗಿದೆ. ಒಬ್ಬಾತನಿಗೆ ಚಾಕುವಿನಿಂದ ತಿವಿಯಲಾಗಿದೆ. ಗಾಯಗೊಂಡಿದ್ದ ಯುಕವನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.
ಟ್ಯಾಂಕ್ ಮೊಹಲ್ಲಾ ರಂಗನಾಥ (21) ಚಾಕು ಇರಿತಕ್ಕೆ ಒಳಗಾದವನು. ಸುದೀಪ್ (21) ಎಂಬಾತನ ಮೇಲೆ ಹಲ್ಲೆ ನಡೆಸಲಾಗಿದೆ.
ಗಲಾಟೆಗೆ ಕಾರಣವೇನು?
ಶುಕ್ರವಾರ ರಾತ್ರಿ ಟ್ಯಾಂಕ್ ಮೊಹಲ್ಲಾದ ಸರ್ಕಾರಿ ಆಸ್ಪತ್ರೆ ಸಮೀಪ ಶಿವದರ್ಶನ್ ನಡೆದು ಹೋಗುತ್ತಿದ್ದಾಗ ನಾಲ್ವರು ಯುವಕರು ಅಡ್ಡಗಟ್ಟಿದ್ದಾರೆ. ಸುದೀಪ್ ಎಂಬಾತನ ಅಕ್ಕನ ಮಗಳು ಇದ್ದ ಫ್ಲೆಕ್ಸ್ ಹರಿದಿದ್ದೇಕೆ ಎಂದು ಶಿವದರ್ಶನ್’ಗೆ ಪ್ರಶ್ನೆ ಮಾಡಿ, ಹಲ್ಲೆ ಮಾಡಲು ಆರಂಭಿಸಿದ್ದಾರೆ.
ಜಗಳ ಬಿಡಿಸಲು ಹೋದ ರಂಗನಾಥ್ ಅವರಿಗೆ ಸುದೀಪ್ ಚಾಕುವಿನಿಂದ ತಿವಿದಿದ್ದಾನೆ. ಭುಜದ ಕೆಳ ಭಾಗದಲ್ಲಿ ಚಾಕು ತಿವಿತದಿಂದ ಗಾಯವಾಗಿದ್ದು, ರಂಗನಾಥ ಜೋರಾಗಿ ಕೂಗಿಕೊಂಡಿದ್ದಾನೆ. ಕೂಡಲೆ ಜನ ಸೇರಿದ್ದು, ರಂಗನಾಥ ಮತ್ತು ಶಿವದರ್ಶನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಗಲಾಟೆ ಸಂದರ್ಭ ರಂಗನಾಥನ ಕೊರಳಲ್ಲಿ ಇದ್ದ ಬೆಳ್ಳಿ ಸರ, ಮೊಬೈಲ್ ನಾಪತ್ತೆಯಾಗಿದೆ. ಘಟನೆ ಸಂಬಂಧ ಟ್ಯಾಂಕ್ ಮೊಹಲ್ಲಾದ ಸುದೀಪ್, ಶರತ್, ಆಕಾಶ್, ರಾಹೀಲ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಕೋಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















