ಮಗನ ಮೇಲೆ ಹಲ್ಲೆ ಮಾಡಿದ್ದನ್ನು ಪ್ರಶ್ನಿಸಿದ ಆಟೋ ಚಾಲಕನಿಗೆ ಚಾಕು ಇರಿತ, ಸಾವು

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

SHIVAMOGGA LIVE NEWS | SHIMOGA | 12 ಜುಲೈ 2022

ಮಗನ ಮೇಲೆ ಹಲ್ಲೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಆಟೋ ಚಾಲಕನಿಗೆ ಚಾಕು ಇರಿಯಲಾಗಿದೆ (ASSAULT). ಗಂಭೀರ ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಟೋ ಚಾಲಕ ಕೊನೆಯುಸಿರೆಳೆದಿದ್ದಾರೆ (DEATH).

Shimoga Nanjappa Hospital

ಆಟೋ ಚಾಲಕ (AUTO DRIVER) ಅಣ್ಣಾನಗರದ ಮೆಹಬೂಬ್‌ ಪಾಷಾ (52) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಜು.7ರಂದು ಬೆಳಗ್ಗೆ ಮನೆ ಮುಂದೆ ನಿಲ್ಲಿಸಿದ್ದ ಆಟೋ ಮೇಲಿನ ಟಾರ್ಪಲ್ ತೆಗೆಯುವಾಗ ಎದುರು ಮನೆಯ ಚೋ‌ರ್ ಬಚ್ಚ ಅಲಿಯಾಸ್ ತಬ್ರೇಜ್ ಚಾಕು ಇರಿದಿದ್ದ.

ಗಂಭೀರವಾಗಿ ಗಾಯಗೊಂಡಿದ್ದ ಮೆಹಬೂಬ್ ಪಾಷಾ ಅವರನ್ನು ಮೆಗ್ಗಾನ್ ಆಸ್ಪತ್ರೆ ತೀವ್ರ ನಿಗಾ ಘಟಕದಲ್ಲಿಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸೋಮವಾರ ಮೃತಪಟ್ಟಿದ್ದಾರೆ.

ಮೆಹಬೂಬ್ ಪಾಷಾನ ಹಿರಿಯ ಪುತ್ರ ಜುನೈದ್ ಪಾಷಾ ಮತ್ತು ಚೋರ್ ಬಚ್ಚನ ನಡುವೆ ಕದ್ದ ಮೊಬೈಲ್‌ ಬಗ್ಗೆ ಜಗಳವಾಗಿತ್ತು. ಜುನೈದ್ ಪಾಷಾ ಮೊದಲು ಚೋ‌ರ್ ಬಚ್ಚನ ಮೇಲೆ ಹಲ್ಲೆ ನಡೆಸಿದ್ದ. ಇದಕ್ಕೆ ಪ್ರತೀಕಾರವಾಗಿ ಚೋ‌ರ್ ಬಚ್ಚನೂ ಜುನೈದ್ ಮೇಲೆ ಹಲ್ಲೆ ಮಾಡಿದ್ದ.

ಜು.7ರಂದು ಬೆಳಗ್ಗೆ ಅಣ್ಣಾನಗರದ (ANNA NAGARA) 8ನೇ ಕ್ರಾಸ್‌ನ ಮನೆ ಮುಂದೆ ಮೆಹಬೂಬ್ ಪಾಷಾ, ಪುತ್ರ ಜುನೈದ್ ಮೇಲೆ ಹಲ್ಲೆ ಮಾಡಿದ್ದು ಏಕೆ ಎಂದು ಪ್ರಶ್ನಿಸಿದ್ದ. ಅಷ್ಟಕ್ಕೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿತ್ತು. ಈ ವೇಳೆ ಮನೆಯಲ್ಲಿದ್ದ ಚಾಕು ತಂದ ಚೋರ್ ಬಚ್ಚ, ಮೆಹಬೂಬ್ ಪಾಷಾನಿಗೆ ಹಲವು ಕಡೆ ಇರಿದು ಗಾಯಗೊಳಿಸಿದ್ದ. ಚಾಕು ಇರಿತದಿಂದ ಕುಸಿದುಬಿದ್ದ ಮೆಹಬೂಬ್ ಪಾಷಾನನ್ನು ಕಿರಿಯ ಪುತ್ರ ಇಮ್ರಾನ್, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದ. ತೀವ್ರ ನಿಗಾ ಘಟಕದಲ್ಲಿದ್ದ ಮೆಹಬೂಬ್ ಪಾಷಾ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ – ಮಥುರಾ ಪ್ಯಾರಡೈಸ್ ಬಳಿ ಯುವತಿಯರನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Leave a Comment