ಶಿವಮೊಗ್ಗದಲ್ಲಿ ಆಟೋ ಪ್ರಯಾಣ ದರ ಹೆಚ್ಚಳ, ಏರಿಕೆಯಾಗಿದ್ದೆಷ್ಟು? ಈವರೆಗೂ ಇದ್ದಿದ್ದೆಷ್ಟು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 NOVEMBER 2022

SHIMOGA | ಆರು ವರ್ಷದ ಬಳಿಕ ಶಿವಮೊಗ್ಗ ನಗರದಲ್ಲಿ ಆಟೋ ಪ್ರಯಾಣ (auto fare) ದರ ಹೆಚ್ಚಳವಾಗಿದೆ. ಮೊದಲ ಒಂದೂವರೆಗೆ ಕಿ.ಮೀಗೆ 40 ರೂ.ಗೆ ಏರಿಸಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಮೊದಲ ಒಂದೂವರೆ ಕಿ.ಮೀಗೆ 40 ರೂ.ಗೆ ಹೆಚ್ಚಳ ಮಾಡಲಾಗಿದೆ. ನಂತರ ಪ್ರತಿ ಕಿ.ಮೀಗೆ 20 ರೂ. ದರ ವಿಧಿಸಲಾಗುತ್ತಿದೆ. ರಾತ್ರಿ 10 ಗಂಟೆಯಿಂದೆ ಬೆಳಗ್ಗೆ 5 ಗಂಟೆವರೆಗೆ ಒನ್ ಅಂಡ್ ಹಾಫ್ ದರ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.

ಆರು ವರ್ಷದ ಬಳಿಕ ಏರಿಕೆ (auto fare)

ಇಂಧನ, ಅಗತ್ಯ ವಸ್ತುಗಳ ಬೆಲೆ ಏರಿಕೆಯಾದಂತೆ ಆಟೋ ಪ್ರಯಾಣ ದರವು ಏರಿಕೆಯಾಗಬೇಕು. ಆದರೆ 2016ರಿಂದ ಪ್ರಯಾಣ ದರ ಹೆಚ್ಚಳ ಸಂಬಂಧ ಸಭೆ ನಡೆದಿರಲಿಲ್ಲ. ಹಾಗಾಗಿ ಆರು ವರ್ಷದ ಬಳಿಕ ಶಿವಮೊಗ್ಗದಲ್ಲಿ ಆಟೋ ಪ್ರಯಾಣ ದರ ಏರಿಕೆಯಾಗಿದೆ. ಈ ಮುಂಚೆ ಪ್ರತಿ ಒಂದೂವರೆ ಕಿ.ಮೀಗೆ 25 ರೂ. ದರವಿತ್ತು.

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಸಾರಿಗೆ ಇಲಾಖೆ ಅಧಿಕಾರಿಗಳು, ವಿವಿಧ ಆಟೋ ಸಂಘಟನೆಗಳ ಪ್ರಮುಖರು, ಆಟೋ ಚಾಲಕರು ಸಭೆಯಲ್ಲಿ ಇದ್ದರು.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಸಿಗಂದೂರು ಸೇತುವೆ ಕಾಮಗಾರಿ ಪರಿಶೀಲಿಸಿದ ಸಂಸದ, ಕೆಲಸದ ಬಗ್ಗೆ ಹೇಳಿದ್ದೇನು?

shimoga live news

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment