ಶಿವಮೊಗ್ಗ ಬಸ್‌ ನಿಲ್ದಾಣದಲ್ಲು ಆಟೋ ಪ್ರೀ ಪೇಯ್ಡ್‌ ಕೌಂಟರ್‌, ಯಾವಾಗ ಶುರು? ಡಿಸಿ ಏನೆಲ್ಲ ಹೇಳಿದರು?

 ಶಿವಮೊಗ್ಗ  LIVE 

ಶಿವಮೊಗ್ಗ: ಪ್ರಯಾಣಿಕರ ಅನುಕೂಲಕ್ಕಾಗಿ ಶಿವಮೊಗ್ಗದ KSRTC ಮತ್ತು ಖಾಸಗಿ ಬಸ್ ನಿಲ್ದಾಣದ ಬಳಿ ಆಟೋ ರಿಕ್ಷಾ (auto rickshaw)  ಪ್ರೀ ಪೇಯ್ಡ್ ಕೌಂಟರ್‌ಗಳನ್ನು ತೆರೆಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಟೋ ರಿಕ್ಷಾ ಸಂಘಗಳು ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರಿದ ಅಧಿಕಾರಿಗ ಜೊತೆಗಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Pre-Paid-Auto-Counters-near-Shimoga-Bus-stand.

ಜಿಲ್ಲಾಧಿಕಾರಿ ಏನಂದರು? ಇಲ್ಲಿದೆ ಪಾಯಿಂಟ್ಸ್‌

1ಶಿವಮೊಗ್ಗ ರೈಲ್ವೆ ನಿಲ್ದಾಣದ ಬಳಿ ಇರುವ ಆಟೋ ರಿಕ್ಷಾ ಪ್ರೀ ಪೇಯ್ಡ್ ಕೌಂಟರ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗುತ್ತಿದೆ. ಅದೇ ರೀತಿ ಸರ್ಕಾರಿ ಹಾಗೂ ಖಾಸಗಿ ಬಸ್ ನಿಲ್ದಾಣಗಳಲ್ಲು ಆಟೋ ರಿಕ್ಷಾ ಪ್ರೀ ಪೇಯ್ಡ್ ಕೌಂಟರ್ ತೆರೆಯಲಾಗುತ್ತಿದೆ. ಇನ್ನು ಮುಂದೆ ಬಸ್ ಪ್ರಯಾಣಿಕರು ಇದರ ಅನುಕೂಲ ಪಡೆಯಬಹುದು.

Pre-Paid-Auto-Counters-near-Shimoga-Bus-stand.

2ಜನವರಿ 15ರ ನಂತರ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ನಿಲ್ದಾಣಗಳ ಬಳಿ ಪ್ರಿ ಪೇಯ್ಡ್ ಕೌಂಟರ್ ಪ್ರಾರಂಭಿಸಲಾಗುತ್ತದೆ. ಚೈತನ್ಯ ರೂರಲ್ ಡೆವಲಪ್‌ಮೆಂಟ್ ಕಾರ್ಯದರ್ಶಿಗೆ ಅನುಮೋದನೆ ನೀಡಲಾಗಿದೆ. ಕೌಂಟರ್‌ ಸ್ಥಾಪಿಸಲು ಪೊಲೀಸ್ ಹಾಗೂ ಆರ್‌ಟಿಓ ಇಲಾಖೆಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಬೇಕು.

Pre-Paid-Auto-Counters-near-Shimoga-Bus-stand.

3ಮುಂಜಾನೆ 4.45, ಬೆಳಗ್ಗೆ 11 ಗಂಟೆ, ಸಂಜೆ 7.30 ಹಾಗೂ ರಾತ್ರಿ 9.30 ರ ಸಮಯದಲ್ಲಿ ಪ್ರಯಾಣಿಕರು ಮನೆಗೆ ತೆರಳಲು ಆಟೋ ರಿಕ್ಷಾಗಳನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಹಾಗಾಗಿ ರೈಲ್ವೆ ನಿಲ್ದಾಣದ ಬಳಿ ಇರುವ ಆಟೋ ರಿಕ್ಷಾ ಪ್ರೀ ಪೇಯ್ಡ್ ಕೌಂಟರ್‌ಗೆ ಹೆಚ್ಚಿನ ಸಿಬ್ಬಂದಿ ನೇಮಿಸಬೇಕು. ಕೌಂಟರ್‌ನಲ್ಲಿ ತಾಂತ್ರಿಕ ಸಮಸ್ಯೆ ಆಗದಂತೆ ಎಚ್ಚರ ವಹಿಸಬೇಕು ಎಂದು ಚೈತನ್ಯ ರೂರಲ್ ಡೆವಲಪ್‌ಮೆಂಟ್ ಕಾರ್ಯದರ್ಶಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

4ಜಿಲ್ಲೆಯಲ್ಲಿರುವ ಆಟೋ ಚಾಲಕರು ಕಡ್ಡಾಯವಾಗಿ ಪರವಾನಗಿ ಮತ್ತು ಬ್ಯಾಡ್ಜ್ ಸೇರಿದಂತೆ ಅಗತ್ಯ ದಾಖಲೆ ಇಟ್ಟುಕೊಂಡು ಶಿಸ್ತಿನಿಂದ ಕಾರ್ಯ ನಿರ್ವಹಿಸಬೇಕು. ಪ್ರೀ ಪೇಯ್ಡ್‌ಗೆ ಆಟೋ ರಿಕ್ಷಾಗಳನ್ನು ನೋಂದಣಿ ಮಾಡಿಕೊಳ್ಳಬೇಕು. ರೈಲ್ವೆ ಹಾಗೂ ಬಸ್ ನಿಲ್ದಾಣಗಳ ಒಳಗೂ ಹೊರಗೂ ಆಟೋ ರಿಕ್ಷಾ ಪ್ರಿ ಪೇಯ್ಡ್ ಕುರಿತು ಫಲಕಗಳು ಹಾಗೂ ಘೋಷಿಸುವ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಇದಕ್ಕೆ ಆಟೋ ಸಂಘಗಳು ಕೂಡ ಸಹಕಾರ ನೀಡಬೇಕು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೈಸೂರಿನ ಮಹಿಳೆ ಸಾವು, ಪೊಲೀಸ್‌ ಸಿಬ್ಬಂದಿ ಕಾರ್ಯಕ್ಕೆ ಜನ ಮೆಚ್ಚುಗೆ, ಆಗಿದ್ದೇನು?

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷ ಕಾರ್ಯಪ್ಪ, ಆರ್‌ಟಿಓ ಅಧೀಕ್ಷಕ ಶಶಿಧರ್, ಸಂಚಾರಿ ಪೊಲೀಸ್ ನಿರೀಕ್ಷಕ ದೇವರಾಜ್, ಮಹಾನಗರ ಪಾಲಿಕೆಯ ಅಧಿಕಾರಿಗಳು, ಚೈತನ್ಯ ರೂರಲ್ ಡೆವಲಪ್‌ಮೆಂಟ್ ಅಧಿಕಾರಿಗಳು ಹಾಗೂ ಆಟೋ ರಿಕ್ಷಾ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಜರಿದ್ದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment