SHIMOGA NEWS, 23 OCTOBER 2024 : ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಜನ್ಮದಿನದ ಸಂದರ್ಭ ನೀಡುವ ಬಂಗಾರ ಪ್ರಶಸ್ತಿಗೆ (Award) ಮೂವರು ಸಾಧಕರನ್ನು ಆಯ್ಕೆ ಮಾಡಲಾಗಿದೆ. ಅ.26ರಂದು ಸೊರಬದ ಬಂಗಾರಧಾಮದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಬಂಗಾರಪ್ಪ ವಿಚಾರ ವೇದಿಕೆ ಅಧ್ಯಕ್ಷ ವೇಣುಗೋಪಾಲ್ ನಾಯಕ್, ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಎಸ್.ಜಿ.ಸುಶೀಲಮ್ಮ, ಸಾಹಿತಿ ಕುಂ.ವೀರಭದ್ರಪ್ಪ, ಗ್ರಾಮೀಣ ರಂಗಭೂಮಿ ಕಲಾವಿದೆ ಪ್ರತಿಭಾ ನಾರಾಯಣ್ ಅವರಿಗೆ ಈ ಬಾರಿ ಬಂಗಾರ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಮತ್ತು ತಾಮ್ರದ ಫಲಕವನ್ನು ಹೊಂದಿರಲಿದೆ ಎಂದರು.
ಉದ್ಘಾಟನೆಗೆ ಹೋಮ್ ಮಿನಿಸ್ಟರ್ Award
ಅ.26ರಂದು ಸಂಜೆ 4.30ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಉದ್ಘಾಟಿಸಲಿದ್ದಾರೆ. ನಟ ಡಾ. ಶಿವರಾಜ್‌ಕುಮಾರ್, ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ, ಬಂಗಾರಪ್ಪ ಅವರ ಒಡನಾಡಿ ಬಸಪ್ಪ ಅಂಕರವಳ್ಳಿ, ಬಂಗಾರಪ್ಪ ವಿಚಾರ ವೇದಿಕೆ ಅಧ್ಯಕ್ಷ ವೇಣುಗೋಪಾಲ್ ನಾಯಕ್, ನಾಟಕ ಅಕಾಡೆಮಿ ಅಧ್ಯಕ್ಷ ನಾಗರಾಜ ಮೂರ್ತಿ ಕಾರ್ಯಕ್ರಮದಲ್ಲಿ ಇರಲಿದ್ದಾರೆ ಎಂದರು.
ಅ.26ರಂದು ಬೆಳಗ್ಗೆ 10.30ಕ್ಕೆ ಸೊರಬದ ಡಾ. ರಾಜ್‌ಕುಮಾರ್ ರಂಗಮಂದಿರದಲ್ಲಿ ಬಂಗಾರಪ್ಪ ಸಮಾಜವಾದಿ ಚಿಂತನೆಗಳು, ಇಂದಿನ ಪ್ರಸ್ತುತತೆ ಕುರಿತು ವಿಚಾರ ಸಂಕಿರಣ ನಡೆಯಲಿದೆ. ಪ್ರೊ. ಎಲ್.ಎನ್.ಮುಕುಂದರಾಜ್, ಸಿರಾಜ್ ಅಹಮದ್ ಅವರು ವಿಚಾರ ಮಂಡಿಸಲಿದ್ದಾರೆ. ಪ್ರೊ. ಎಸ್.ಜಿ.ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ.
ವೇಣುಗೋಪಾಲ್ ನಾಯಕ್, ಅಧ್ಯಕ್ಷ, ಎಸ್.ಬಂಗಾರಪ್ಪ ವಿಚಾರ ವೇದಿಕೆ
ಅ.26ರಂದು ಸಂಜೆ 5 ಗಂಟೆಗೆ ರಂಗಮಂದಿರದಿಂದ ಬಂಗಾರಧಾಮದವರೆಗೆ ಮೆರವಣಿಗೆ ನಡೆಯಲಿದೆ. ಆ ಬಳಿಕ ಬಂಗಾರ ಪ್ರಶಸ್ತ ಪ್ರದಾನ ಸಮಾರಂಭ ನಡೆಯಲಿದೆ.
ಜಿ.ಡಿ.ಮಂಜುನಾಥ್, ಕಾಂಗ್ರೆಸ್ ನಾಯಕ
ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳು
ಬಂಗಾರಪ್ಪ ಅವರ ಜನ್ಮದಿನೋತ್ಸವ ಅಂಗವಾಗಿ ಅ.24ರಂದು ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ, ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಪ್ರತಿ ತಾಲೂಕಿನಿಂದ ತಲಾ ಮೂವರು ವಿಜೇತರಿಗೆ ಅ.26ರಂದು ಬಂಗಾರಪ್ಪ ಅವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಬಹುಮಾನ ನೀಡಲಾಗುತ್ತದೆ ಎಂದು ವೇಣುಗೊಪಾಲ್ ನಾಯಕ್ ತಿಳಿಸಿದರು.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಪೊಲೀಸರಿಂದ ದಿಢೀರ್ ದಾಳಿ, 512 ಕಡೆ ದಂಡ, 5 ಎಫ್‌ಐಆರ್ ದಾಖಲು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200