ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಡಿಸೆಂಬರ್ 2021
ಶಿವಮೊಗ್ಗ ಮೆಡಿಕಲ್ ಕಾಲೇಜಿನ ಅಸೋಸಿಯೇಟೆಡ್ ಪ್ರೊಫೆಸರ್ ಡಾ.ಹೇಮಾಮೋಹನ್ ಅವರಿಗೆ ರಾಜ್ಯಸರಕಾರ ಉತ್ತಮ ವೈದ್ಯೆ ಪ್ರಶಸ್ತಿ ಪ್ರದಾನ ಮಾಡಿದೆ.
ಬೆಳಗಾವಿಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವರ ಸಮ್ಮುಖದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಡಾ. ಹೇಮಾ ಮೋಹನ್ ಅವರು ಶಿವಮೊಗ್ಗ ಮೆಡಿಕಲ್ ಕಾಲೇಜಿನ ಹೆಚ್.ಐ.ವಿ. ವಿಭಾಗದ ಮುಖ್ಯ ವೈದ್ಯಾಧಿಕಾರಿಯೂ ಆಗಿದ್ದು, ಹೆಚ್ಐವಿ ಪೀಡಿತ ಗರ್ಭಿಣಿಗೆ ನೀಡಿದ್ದ ಚಿಕಿತ್ಸೆಗಾಗಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ. ರಾಜ್ಯ ಸರಕಾರ ರಾಜ್ಯದ ಮೂವರು ಉತ್ತಮ ಸರಕಾರಿ ವೈದ್ಯರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಅದರಲ್ಲಿ ಡಾ.ಹೇಮಾಮೋಹನ್ ಆಯ್ಕೆಯಾಗಿರುವುದು ಶಿವಮೊಗ್ಗಕ್ಕೆ ತಂದ ಗೌರವವಾಗಿದೆ.
ಹೇಮಾಮೋಹನ್ ಅವರು ಶಿವಮೊಗ್ಗದ ಹಿರಿಯ ವೈದ್ಯ ಡಾ.ವೆಂಕಟಗಿರಿಯಪ್ಪ ಅವರ ಸೊಸೆಯಾಗಿದ್ದಾರೆ. ಹೇಮಾ ಮೋಹನ್ ಅವರ ಸಾಧನೆಗೆ ಶಿವಮೊಗ್ಗ ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಅಭಿನಂದಿಸಿದೆ.

LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





