ಸಂಸದ ರಾಘವೇಂದ್ರಗೆ ಪ್ರಶಸ್ತಿ ಘೋಷಣೆ, ಜನವರಿ 3ರಂದು ಪ್ರದಾನ

ಶಿವಮೊಗ್ಗ: ಬೆಕ್ಕಿನಕಲ್ಮಠದ ಗುರುಬಸವ ಭವನದಲ್ಲಿ ಜ.3ರಿಂದ 5ರ ವರೆಗೆ ಲಿಂಗೈಕ್ಯ ಗುರುಬಸವ ಸ್ವಾಮಿಗಳ 114ನೇ ಪುಣ್ಯಸ್ಮರಣೋತ್ಸವ ಆಯೋಜಿಸಲಾಗಿದೆ. ಈ ಬಾರಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಗುರುಬಸವಶ್ರೀ ಪ್ರಶಸ್ತಿ (Award), ಕಲಬುರ್ಗಿಯ ಸಾಹಿತಿ ಡಾ.ಜಯಶ್ರೀ ದಂಡೆ ಅವರಿಗೆ ಅಕ್ಕಮಹಾದೇವಿ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಬೆಕ್ಕಿನ ಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ತಿಳಿಸಿದರು.

ಬೆಕ್ಕಿನ ಕಲ್ಮಠದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಮೂರು ದಿನದ ಕಾರ್ಯಕ್ರಮಗಳ ವಿವರಣ ನೀಡಿದರು.

ಯಾವ್ಯಾವ ದಿನ ಏನೇನು ಕಾರ್ಯಕ್ರಮವಿದೆ?

ಜನವರಿ 3ರ ಸಂಜೆ 5 ಗಂಟೆಗೆ 556ನೇ ಶಿವಾನುಭವ ಗೋಷ್ಠಿ, ಗುರುಬಸವಶ್ರೀ ಹಾಗೂ ಅಕ್ಕಮಹಾದೇವಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕನಕಪುರ ದೇಗುಲಮಠದ ಚನ್ನಬಸವೇಶ್ವರ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಾಸಕ ಎಸ್.ಎನ್.ಚನ್ನಬಸಪ್ಪ ಮಠದ ದಿನದರ್ಶಿಕೆ ಬಿಡುಗಡೆ ಮಾಡುವರು.

071223-BY-Raghavendra-General-Image.webp

ಜನವರಿ 4ರ ಬೆಳಿಗ್ಗೆ 10 ಗಂಟೆಗೆ ರಂಗೋಲಿ ಹಾಗೂ ಜನಪದ ಗೀತೆಗಳ ಸ್ಪರ್ಧೆಯನ್ನು ಹಾನಗಲ್ ವಿರಕ್ತಮಠದ ಶಿವಯೋಗಿ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ತಾಳಗುಪ್ಪದ ಕೂಡಲಿಮಠದ ಸಿದ್ಧವೀರ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಶರಣ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಇದೇ ವೇಳೆ ಪ್ರಾಧ್ಯಾಪಕ ಸಿ.ನಾಗಭೂಷಣ್ ಅವರಿಗೆ ಅಲ್ಲಮ ಪ್ರಭು ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಇದನ್ನೂ ಓದಿ » ಮೆಕಾನಿಕಲ್‌ ಇಂಜಿನಿಯರ್‌ ಇನ್ಮುಂದೆ ಶಿವಮೊಗ್ಗ ಪೊಲೀಸ್‌ ಇಲಾಖೆಯ ‘ಮೈಕ್‌ ಒನ್‌ʼ

ಜನವರಿ 5ರ ಬೆಳಿಗ್ಗೆ 7ಕ್ಕೆ ಸಾಮೂಹಿಕ ಇಷ್ಟಲಿಂಗ ಮಹಾಪೂಜೆ ಮತ್ತು ಶೂನ್ಯ ಪೀಠಾರೋಹಣ ನಡೆಯಲಿದೆ. ಹುಣಸಘಟ್ಟದ ಗುರುಮೂರ್ತಿ ಶಿವಾಚಾರ್ಯರು ಉದ್ಘಾಟಿಸಲಿದ್ದಾರೆ. ನವಲಗುಂದದ ಗವಿಮಠದ ಬಸವಲಿಂಗ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 4.30ಕ್ಕೆ ಶ್ರೀಗಳ ಪುಣ್ಯಸ್ಮರಣೆ ಹಾಗೂ ಭಾವೈಕ್ಯ ಸಮ್ಮೇಳನವನ್ನು ಧಾರವಾಡದ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಉದ್ಘಾಟಿಸಲಿದ್ದಾರೆ.

Bekkina Kalmata Swamiji press meet

ಇದನ್ನೂ ಓದಿ » ಶಿವಮೊಗ್ಗದಲ್ಲಿ ಹೊಸ ವರ್ಷಕ್ಕೆ ಸಂಭ್ರಮದ ಸ್ವಾಗತ, ಎಲ್ಲೆಲ್ಲಿ ಹೇಗಿತ್ತು?

ಇದೇ ಮೊದಲ ಬಾರಿಗೆ ಭಾವೈಕ್ಯತಾ ಪ್ರಶಸ್ತಿಯನ್ನು ಶಿವಮೊಗ್ಗದ ಗಾಂಧಿ ಬಸಪ್ಪ ಮತ್ತು ಹಳದಮ್ಮ ಪ್ರತಿಷ್ಠಾನಕ್ಕೆ ನೀಡಲಾಗುತ್ತಿದೆ. ಚಿಂತಕ ಮಹೇಶ್ ಮಾಶಾಳ್ ಉಪನ್ಯಾಸ ನೀಡಲಿದ್ದಾರೆ ಎಂದು ಹೇಳಿದರು.

ಸ್ಮರಣೋತ್ಸವ ಸಮಿತಿಯ ಅಧ್ಯಕ್ಷ ಕೆ.ಎನ್.ತಾರಾನಾಥ್, ಪ್ರಧಾನ ಕಾರ್ಯದರ್ಶಿ ಎಸ್.ಎನ್.ಮಹಾಲಿಂಗಯ್ಯ ಶಾಸ್ತ್ರಿ, ಖಜಾಂಚಿ ಹರ್ಷ ರುದ್ರೇಗೌಡ್ರು, ಪ್ರಮುಖರಾದ ಹೆಚ್.ಸಿ.ಯೋಗೀಶ್, ಎಸ್.ಎಸ್. ಜ್ಯೋತಿಪ್ರಕಾಶ್, ಶಾಂತಾ ಆನಂದ್, ಚಂದ್ರಶೇಖರಯ್ಯ, ಅನಿತಾ ರವಿಶಂಕರ್, ವಿವಿಧ ಸಮಿತಿಗಳ ಅಧ್ಯಕ್ಷರಾದ ಪುಷ್ಪಾ ಹಾಲಪ್ಪ, ವಿ.ಟಿ.ಅರುಣ್, ನಾಗರತ್ನಾ ಚಂದ್ರಶೇಖರ್, ಟಿ.ಎಸ್.ಸಿದ್ದೇಶ್, ಬಿ.ಶಿವರಾಜ್, ಸಂಚಾಲಕ ಡಾ.ವಿದ್ವಾನ್ ರೇಣುಕಾರಾಧ್ಯ, ಕಿರಣ್ ದೇಸಾಯಿ ಉಪಸ್ಥಿತರಿದ್ದರು.

Award
071223-BY-Raghavendra-General-Image.webp

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment