SHIVAMOGGA LIVE NEWS, 25 DECEMBER 2024
ಶಿವಮೊಗ್ಗ : ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಮೂವರಿಗೆ ಹೆಮ್ಮೆಯ ವಾಣಿಜ್ಯೋದ್ಯಮಿ (Business Men) ಪ್ರಶಸ್ತಿ ನೀಡಲಾಗುತ್ತಿದೆ. ಡಿಸೆಂಬರ್ 28ರಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೆರೋಕ್ಯಾಸ್ಟ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಕರ್ನಾಟಕ ವಾಣಿಜ್ಯ ಮತ್ತು ಕೈಗರಿಕಾ ಮಹಾಸಂಸ್ಥೆಯ ಅಧ್ಯಕ್ಷ ಎಂ.ಜಿ.ಬಾಲಕೃಷ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು.
ಮಾನಸ ವೆಟ್ ಫಾರ್ಮಾದ ಗಜಾನನ ಹೆಗಡೆ, ಕನ್ನಿಕಾ ಟ್ರೇಡರ್ಸ್‌ನ ಹೆಚ್.ಎನ್.ನಂಜುಂಡರಾಜು ಶೆಟ್ಟಿ, ಶಾಸ್ತ್ರಿ ಆಟೊಮೊಬೈಲ್ಸ್‌ನ ಪ್ರಶಾಂತ ಶಾಸ್ತ್ರಿ ಅವರಿಗೆ 2024ರ ಹೆಮ್ಮೆಯ ವಾಣಿಜ್ಯೋದ್ಯಮಿ ಪ್ರಶಸ್ತಿ ನೀಡಲಾಗುತ್ತಿದೆ. ಆಡಿಟರ್ ಎಸ್.ಬಿ.ಹನುಮಂತಪ್ಪ ಅವರಿಗೆ ವಿಶೇಷ ಪುರಸ್ಕಾರ ನೀಡಲಾಗುತ್ತಿದೆ.
ಬಿ.ಗೋಪಿನಾಥ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ
ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಡಾ. ಬಿ.ವಿ.ಲಕ್ಷ್ಮಿದೇವಿ ಗೋಪಿನಾಥ್, ವಸಂತ ಕುಮಾರ್, ಅಶ್ವಥ ನಾರಾಯಣ ಶೆಟ್ಟಿ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೂರು ದಿನ ನಾಟಕೋತ್ಸವ, ಯಾವೆಲ್ಲ ನಾಟಕ ಪ್ರದರ್ಶನವಾಗಲಿದೆ?