ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟಂಬರ್ 2020
ಕಾರ್ಮಿಕರಿಗೆ ಸೌಲಭ್ಯಗಳನ್ನು ಕೊಡಬೇಕಾದ ಕಾರ್ಮಿಕ ಇಲಾಖೆಯೇ ಅಶಕ್ತವಾಗಿದೆ ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಹಾಗೂ ವಿಧಾನಪರಿಷತ್ ಶಾಸಕ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸಂಘಟಿತ ವಲಯದಲ್ಲಿ ಲಕ್ಷಾಂತರ ಕಾರ್ಮಿಕರಿದ್ದಾರೆ. ಇವರಿಗೆ ಕಾರ್ಮಿಕ ಇಲಾಖೆಯಿಂದ ಸಿಗಬೇಕಾದ ಸೌಲಭ್ಯಗಳೇ ಸಿಗುತ್ತಿಲ್ಲ. ತಾಲೂಕು ಕೇಂದ್ರಗಳಲ್ಲಿ ಇಲಾಖೆಯ ಇನ್ಸ್ ಪೆಕ್ಟರ್ಗಳೇ ಇಲ್ಲ. ಜಿಲ್ಲಾ ಕೇಂದ್ರದಲ್ಲಿ ಸಿಬ್ಬಂದಿಗಳ ಕೊರತೆ ಇದೆ. ಇಲಾಖೆಯಲ್ಲಿ ನೊಂದಾಯಿಸಿಕೊಂಡಿರುವ ಕಾರ್ಮಿಕರ ನವೀಕರಣ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ. ಕಾರ್ಮಿಕ ಇಲಾಖೆಯನ್ನು ಸದೃಢಗೊಳಿಸಬೇಕಿದೆ ಎಂದರು.
ಅಸಂಘಟಿತ ಕಾರ್ಮಿಕರ ಸಂಘ
ಶಿವಮೊಗ್ಗ ಜಿಲ್ಲೆಯಲ್ಲಿರುವ ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿಗೆ ಸಂಘ ಅಸ್ತಿತ್ವಕ್ಕೆ ಬಂದಿದೆ. ಸದಸ್ಯತ್ವ ಅಭಿಯಾನ ನಡೆಯುತ್ತಿದೆ. ಅಸಂಘಟಿತಕ ಕಾರ್ಮಿಕರಿಗೆ ಇಲಾಖೆಯಿಂದ ಗುರುತಿನ ಚೀಟಿ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಸುಮಾರು ೧೦ ಲಕ್ಷಕ್ಕೂ ಅಧಿಕ ಅಸಂಘಟಿತ ಕಾರ್ಮಿಕರಿದ್ದಾರೆ. ಇವರುಗಳೆಲ್ಲರೂ ಸಹ ಈ ಸಂಘಟನೆಗೆ ಸೇರುವಂತಾಗಬೇಕು ಎಂದರು.
ಸಂಘದ ಜಿಲ್ಲಾಧ್ಯಕ್ಷ ಕುಪೇಂದ್ರ ಆಯನೂರು, ರಾಜೇಂದ್ರ, ಮೇಘಾ ಜೆಟ್ಟಿ, ಪ್ರದೀಪ್ ಮಠದ್, ಸಂಧ್ಯಾಕುಮಾರ್, ಗೌರಮ್ಮ, ವಿಜಯಲಕ್ಷ್ಮಿ, ರಾಮಚಂದ್ರ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]