ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 13 ಏಪ್ರಿಲ್ 2020
ಮೆಗ್ಗಾನ್ ಆಸ್ಪತ್ರೆಯ ಕರೋನ ಶಂಕಿತ ರೋಗಿಗಳ ಐಸೋಲೇಷನ್ ವಾರ್ಡ್‍ಗೆ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಭೇಟಿ ನೀಡಿದ್ದರು. ಇಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು.
ಆರೋಗ್ಯ ಇಲಾಖೆ ನೌಕರರ ವೇತನವಾಗಿಲ್ಲ
ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ 351 ನೌಕರರಿಗೆ ವೇತನವಾಗಿಲ್ಲ ಅಂತಾ ಇದೇ ವೇಳೆ ನೌಕರರು ತಿಳಿಸಿದರು. ತುರ್ತು ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿರುವವರ ವೇತನವನ್ನು ಪ್ರತಿ ತಿಂಗಳು ಬಿಡುಗಡೆ ಮಾಡುವ ಸಂಬಂಧ ಸರ್ಕಾರದೊಂದಿಗೆ ಚರ್ಚಿಸುತ್ತೇನೆ. ಹಿಂದಿನ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಡಿ ಉಳಿದ ಅನುದಾನ ಬಿಡುಗಡೆ ಕುರಿತು ರಾಜ್ಯ ಸರ್ಕಾರದೊಂದಿಗೆ ಮಾತನಾಡುತ್ತೇನೆ ಎಂದು ಆಯನೂರು ಮಂಜುನಾಥ್ ಭರವಸೆ ನೀಡಿದರು.
ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮ.ಸ.ನಂಜುಂಡಸ್ವಾಮಿ, ಐ.ಪಿ.ಶಾಂತರಾಜು, ವಿ.ಪ್ರಭಾಕರ್, ಅನಸೂಯ, ಸಿ.ಎಂ.ಹೆಗಡೆ, ವಂದನಾ, ಸಾಗರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪರಮೇಶ್ವರ, ಲಿಪಿಕ ನೌಕರರ ಸಂಘದ ಅಧ್ಯಕ್ಷ ವೈ.ಜೆ.ಶಶಿಕುಮಾರ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422