ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 25 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಮಾಜಿ ಸಂಸದ ಆಯನೂರು ಮಂಜುನಾಥ್ ನೈಋತ್ಯ ಪದವೀಧರ ಕ್ಷೇತ್ರದ ಮತದಾರರ ನೋಂದಣಿ ಕಾರ್ಯಾಲಯ (Election Office) ಆರಂಭಿಸಿದ್ದಾರೆ. ಅಲ್ಲದೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ಗಾಗಿ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗ ನಗರದ ಮಿಷನ್ ಕಾಂಪೌಂಡ್ನಲ್ಲಿ ನೈಋತ್ಯ ಪದವೀಧರರ ಕ್ಷೇತ್ರದ ಮತದಾರರ ನೋಂದಣಿ ಕಾರ್ಯಾಲಯ ಆರಂಭಿಸಲಾಗಿದೆ.
ಇದೆ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಆಯನೂರು ಮಂಜುನಾಥ್, ಚುನಾವಣೆಗೆ ಸ್ಪರ್ಧಿಸಲು ನಾಲ್ಕೈದು ಆಕಾಂಕ್ಷಿಗಳಿದ್ದಾರೆ. ಪಕ್ಷ ಯಾರಿಗೆ ಅವಕಾಶ ನೀಡಲಿದೆ ಎಂಬುದನ್ನು ಕಾದು ನೋಡಬೇಕು. ನನಗೆ ಅವಕಾಶ ಸಿಗಲಿದೆ ಎಂಬ ವಿಶ್ವಾಸ ಇದೆ. ನೈರುತ್ಯ ಪದವೀಧರರ ಕ್ಷೇತ್ರ ಶಿವಮೊಗ್ಗ, ಚಿಕ್ಕಮಗಳೂರು, ಮಂಗಳೂರು, ಉಡುಪಿ, ಕೊಡುಗು, ದಾವಣಗೆರೆಯ ಹೊನ್ನಾಳ್ಳಿ, ನ್ಯಾಮತಿ, ಚನ್ನಗಿರಿ ತಾಲ್ಲೂಕು ಒಳ ಗೊಂಡಿದೆ. ಸೆ.30ರಿಂದ ಚುನಾವಣಾ ನೋಂದಣಿ ಕಾರ್ಯ ನಡೆಯಲಿದೆ. ರಾಜ್ಯದ ಎಲ್ಲಾ ನೌಕರರು, ಶಿಕ್ಷಕರು, ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರ ಪರ ಹೋರಾಟ ಮಾಡಲು ವಿಧಾನಪರಿಷತ್ ಚುನಾವಣೆ ನೆರವಾಗಲಿದೆ ಎಂದರು.
ಇದನ್ನೂ ಓದಿ – ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ಫಿಕ್ಸ್, ದೊಡ್ಡ ಪಟ್ಟಿ ರಿಲೀಸ್, ಏನಿದೆ ಅದರಲ್ಲಿ?