ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಜುಲೈ 2020
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕರೋನ ಸೋಂಕಿಗೆ ತುತ್ತಾಗಿ ಮೃತರಾಗುವವರ ಸಂಖ್ಯೆ ತುಂಬಾ ಕಡಿಮೆ. ಹಾಗಾಗಿ ಸೋಂಕಿನ ಕುರಿತು ಆತಂಕಗೊಳ್ಳಬೇಕಿಲ್ಲ. ಹಾಗೆಂದು ರೋಗವನ್ನು ಕಡೆಗಣಿಸದೆ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಖ್ಯಾತ ಆಯುರ್ವೇದ ವೈದ್ಯ ಡಾ.ಗಿರಿಧರ್ ಕಜೆ ಸಲಹೆ ನೀಡಿದ್ದಾರೆ.
ಕರೋನ ನಿಯಂತ್ರಣಕ್ಕೆ ಆಯುರ್ವೇದಿಕ್ ರೋಗ ನಿರೋಧಕ ಶಿಕ್ತಿವರ್ಧಕ ಕಿಟ್ ವಿತರಣಾ ಕಾರ್ಯಕ್ಕೆ ಚಾಲನೆ ನೀಡಿದ ಬಳಿಕ ಮಾತನಡಿದ ಡಾ.ಗಿರಿಧರ್ ಕಜೆ, ಔಷಧೀಯ ಸಸ್ಯಗಳಿಂದ ಹಲವು ರೋಗಗಳಿಗೆ ಚಿಕಿತ್ಸೆ ನೀಡಲು ಸಾಧ್ಯವಿದೆ. ಭಾರತೀಯ ಪರಂಪರೆಯ ಆಹಾರ ಪದ್ಧತಿ ಸಹಜವಾಗಿಯೇ ನಮ್ಮಲ್ಲಿ ರೋಗ ನಿರೋಧಕ ಶಕ್ತಿಯನ್ನು ಬೆಳೆಸಿದೆ ಎಂದರು.
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಕರೋನಾ ನಿಯಂತ್ರಣಕ್ಕೆ ಜನರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಶಿವಮೊಗ್ಗ ನಗರದಲ್ಲಿ 4 ಲಕ್ಷ ಮಂದಿಗೆ ಆಯುರ್ವೇದಿಕ್ ರೋಗ ನಿರೋಧಕ ಶಕ್ತಿವರ್ಧಕ ಕಿಟ್ ವಿತರಣೆ ಮಾಡಲಾಗುತ್ತಿದೆ. ಇದು ದೇಶದಲ್ಲಿಯೇ ಪ್ರಥಮ ಪ್ರಯತ್ನವಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಪ್ರಸನ್ನಕುಮಾರ್, ಆರ್ಯವೈಶ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಮಲೆನಾಡು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರಳೀಧರ್ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]