ಶಿವಮೊಗ್ಗ ಲೈವ್.ಕಾಂ | SHIMOGA | 9 ನವೆಂಬರ್ 2019
ಅಯೋಧ್ಯೆ ಭೂ ವಿವಾದ ಕುರಿತು ಸುಪ್ರೀಂಕೋರ್ಟ್ ತೀರ್ಪು ಪ್ರಕಟವಾಗಿದೆ. ತೀರ್ಪು ಕುರಿತು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾರೆಲ್ಲ ಏನೇನು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೋಟೆ ದೇವಸ್ಥಾನದಲ್ಲಿ ಈಶ್ವರಪ್ಪ ಭಜನೆ
ತೀರ್ಪು ಪ್ರಕಟವಾಗುತ್ತಿದ್ದಂತೆ ಕೋಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಪೂಜೆ ಸಲ್ಲಿಸಿದರು. ಬಳಿಕ ರಾಮನ ಭಜನೆ ಮಾಡಿ ತೀರ್ಪನ್ನು ಸ್ವಾಗತಿಸಿದರು.
ಬಿಜೆಪಿ ಕಚೇರಿಯಲ್ಲಿ ಸಂಭ್ರಮ
ತೀರ್ಪು ಪ್ರಕಟವಾಗುತ್ತಿದ್ದಂತೆ ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚಾರಣೆ ಮಾಡಲಾಯಿತು. ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಭಜನೆ ಮಾಡಲಾಯಿತು. ಬಳಿಕ ಕಾರ್ಯಕರ್ತರಿಗೆ ಸಿಹಿ ಹಂಚಲಾಯಿತು. ಬಿಜೆಪಿ ಮುಖಂಡರಾದ ಎಂ.ಬಿ.ಭಾನಪ್ರಕಾಶ್, ಡಿ.ಎಸ್.ಅರುಣ್, ಎಸ್.ಎನ್.ಚನ್ನಬಸಪ್ಪ, ಜ್ಞಾನೇಶ್ವರ್, ಗಿರೀಶ್ ಪಟೇಲ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಶಿವಮೊಗ್ಗದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ, ಸಂಸದ ಬಿ.ವೈ.ರಾಘವೇಂದ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಯಾರೆಲ್ಲ ಏನೇನು ಹೇಳಿದ್ದಾರೆ? ಇಲ್ಲಿದೆ ವಿಡಿಯೋ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]