ಶಿವಮೊಗ್ಗ ಹೊಸಮನೆ ಬಳಿ ರಾಷ್ಟ್ರಮಟ್ಟದ ಶಟಲ್ ಬ್ಯಾಡ್ಮಿಂಟನ್ ಆಟಗಾರನಿಗೆ ಕಾರು ಡಿಕ್ಕಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಬೆಳಗಿನ ಜಾವ ನೆಹರೂ ಕ್ರೀಡಾಂಗಣಕ್ಕೆ ತೆರಳುತ್ತಿದ್ದ ರಾಷ್ಟ್ರಮಟ್ಟದ ಶೆಟಲ್ ಬ್ಯಾಡ್ಮಿಂಟನ್ (BADMINTON PLAYER) ಆಟಗಾರನಿಗೆ ಕಾರು ಡಿಕ್ಕಿ ಹೊಡೆದಿದೆ. ಗಾಯಗೊಂಡಿರುವ ಆತನಿಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಸರ್ಜರಿ ಮಾಡಿಸಲಾಗಿದೆ.

Shimoga Nanjappa Hospital

ಚೇತನ್ ಕುಮಾರ್ (35) ಗಾಯಗೊಂಡಿರುವ ಬ್ಯಾಡ್ಮಿಂಟನ್ ಆಟಗಾರ. ಬೆಳಗ್ಗೆ ಪ್ರಾಕ್ಟೀಸ್ ಗೆ ವಿನೋಬನಗರದಿಂದ ನೆಹರೂ ಕ್ರೀಡಾಂಗಣಕ್ಕೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.

ಹೇಗಾಯ್ತು ಘಟನೆ? (BADMINTON PLAYER)

ಮೂಲತಃ ಮಂಡ್ಯ ಜಿಲ್ಲೆಯ ಚೇತನ್ ಕುಮಾರ್ ಅವರು ಕಳೆದ ಎರಡು ವರ್ಷದಿಂದ ಶಿವಮೊಗ್ಗದ ವಿನೋಬನಗರದಲ್ಲಿ ವಾಸವಾಗಿದ್ದಾರೆ. ಅಕ್ಟೋಬರ್ 2ರಂದು ಬೆಳಗ್ಗೆ 5 ಗಂಟೆಗೆ ತಮ್ಮ ರಾಯಲ್ ಎನ್ ಫೀಲ್ಡ್ ಬೈಕಿನಲ್ಲಿ ಮನೆಯಿಂದ ನೆಹರೂ ಕ್ರೀಡಾಂಗಣಕ್ಕೆ ತೆರಳುತ್ತಿದ್ದರು. ಹೊಸಮನೆ 6ನೇ ಅಡ್ಡರಸ್ತೆಯ ಸರ್ಕಲ್ ಬಳಿ ಶರಾವತಿ ನಗರದ ಕಡೆಯಿಂದ ಬಂದು ಸ್ವಿಫ್ಟ್ ಕಾರು ಚೇತನ್ ಕುಮಾರ್ ಅವರ ಬೈಕಿಗೆ ಡಿಕ್ಕಿ ಹೊಡೆದಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ ಬೈಪಾಸ್ ರಸ್ತೆ, ಬೈಕಿಗೆ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿ, ಸವಾರನ ಕಾಲಿಗೆ ಸರ್ಜರಿ

ಗಾಯಗೊಂಡಿದ್ದ ಚೇತನ್ ಕುಮಾರ್ (BADMINTON PLAYER) ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಬಲಗಾಲಿಗೆ ಸರ್ಜರಿ ಮಾಡಲಾಗಿದೆ.

ಚಿಕಿತ್ಸೆ ಪಡೆಯುತ್ತಿದ್ದ ಹಿನ್ನೆಲೆಯಲ್ಲಿ ಚೇತನ್ ಕುಮಾರ್ ಅವರು ತಡವಾಗಿ ದೂರು ನೀಡಿದ್ದಾರೆ. ಸಂಚಾರಿ ಠಾಣೆಯಲ್ಲಿ ಕಾರು ಚಾಲಕ ಶ್ರೀನಿವಾಸ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಚೀಲದಲ್ಲಿ ತುಂಬಿಟ್ಟಿದ್ದ ಸಿಪ್ಪೆಗೋಟು ಅಡಕೆ ರಾತ್ರೋರಾತ್ರಿ ನಾಪತ್ತೆ, ಹೇಗಾಯ್ತು ಕಳ್ಳತನ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment