ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | MURDER | 30 ಮೇ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ 10ನೇ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಪ್ರಕರಣದ 10ನೇ ಆರೋಪಿಯಾಗಿರುವ ಜಾಫರ್ ಸಿದ್ದಿಕ್ಕಿ ವೈದ್ಯಕೀಯ ಕಾರಣ ನೀಡಿ ಜಾಮೀನು ನೀಡುವಂತೆ ಕೋರಿದ್ದ. ಆದರೆ, ಎನ್ಐಎ ಪರ ವಕೀಲ ಪಿ.ಪ್ರಸನ್ನ ಕುಮಾರ್, 10ನೇ ಆರೋಪಿಯು ಪ್ರಕರಣದ ಪ್ರಮುಖ ಆರೋಪಿಗಳಿಗೆ ಸಹಕಾರ ನೀಡಿದ್ದಾನೆ. ಜತೆಗೆ ಎನ್ಐಎ ಅಧಿಕಾರಿಗಳು ಇತ್ತೀಚೆಗಷ್ಟೇ 2ನೇ ಬಾರಿಗೆ ಕೆಲ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿ, ಪುನಃ ಜೈಲಿಗೆ ಕಳುಹಿಸಿದ್ದಾರೆ.
ಪಾತ್ರದ ಬಗ್ಗೆ ಸಂಪೂರ್ಣ ತನಿಖೆ
ಮತ್ತೊಂದೆಡೆ ಪ್ರಕರಣದಲ್ಲಿ ಆರೋಪಿ ಜಾಫರ್ ಸಿದ್ದಿಕ್ಕಿಯ ಪಾತ್ರದ ಬಗ್ಗೆ ತನಿಖಾಧಿಕಾರಿಗಳು ಸಂಪೂರ್ಣ ವರದಿ ಸಲ್ಲಿಸಿಲ್ಲ. ಅಲ್ಲದೆ, ಹರ್ಷ ಕೊಲೆಗೆ ವೈಯಕ್ತಿಕ ದ್ವೇಷ ಕಾರಣವಲ್ಲ. ಹಿಂದೂ ಕಾರ್ಯಕರ್ತ ಎಂಬ ಕಾರಣಕ್ಕೆ ಹತ್ಯೆಗೈಯಲಾಗಿದೆ ಎಂಬುದು ಎನ್ಐಎ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಈ ಮೂಲಕ ಪ್ರಕರಣದ ಎಲ್ಲ ಆರೋಪಿಗಳು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಲು ಯತ್ನಿಸಿದ್ದಾರೆ. ಹೀಗಾಗಿ ಆರೋಪಿಗೆ ಜಾಮೀನು ನೀಡಬಾರದು ಎಂದು ಸರ್ಕಾರಿ ಅಭಿಯೋಜ ಪಿ.ಪ್ರಸನ್ನ ಕುಮಾರ್ ವಾದ ಮಂಡಿಸಿದರು. ವಾದ ಅಂಗೀಕರಿಸಿದ ಕೋರ್ಟ್ ಆರೋಪಿಯ ಜಾಮೀನು ಅರ್ಜಿ ವಜಾಗೊಳಿಸಿದೆ.
ಇದನ್ನೂ ಓದಿ – ಮಹಾನಗರ ಪಾಲಿಕೆ ಸಿಬ್ಬಂದಿ ಮೇಲೆ ಎಸಿಬಿ ರೇಡ್, ಲಂಚದ ಹಣದ ಜೊತೆಗೆ ವಶಕ್ಕೆ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.