ಬಿಸ್ಕತ್ತು, ಕೇಕ್‌, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?

ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು (University) ಡಿ.15ರಿಂದ ಜನವರಿ 13ರವರೆಗೆ 1 ತಿಂಗಳು ನವುಲೆ ಕೃಷಿ ಮಹಾವಿದ್ಯಾಲಯದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ (Bakery) ಉತ್ಪನ್ನಗಳ ತಯಾರಿಕೆ ಕೌಶಲಾಭಿವೃದ್ಧಿತರಬೇತಿ ಹಮ್ಮಿಕೊಂಡಿದೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್‌ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?

ತರಬೇತಿಯಲ್ಲಿ ವಿವಿಧ ರೀತಿಯ ಬಿಸ್ಕತ್ತುಗಳು, ಕೇಕ್, ಬ್ರೆಡ್, ಬನ್, ರಸ್ಕ್, ಕಾರ, ಫಿಜ್ಜಾ, ದಿಲ್ ಪಸಂದ್ ಮತ್ತು ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯನ್ನು ಕಲಿಸಿಕೊಡಲಾಗುತ್ತದೆ. ಆಸಕ್ತರು ತರಬೇತಿ ಶುಲ್ಕ ₹4500 ಪಾವತಿಸಿ, ಡಿ.13ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಮಾಹಿತಿಗೆ ಡಾ.ಎಸ್.ಜಯಶ್ರೀ – 9449187763 ಅಥವಾ ಜಯಶಂಕರ – 9686555897 ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು
JNNCE College Admission 2026
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!