ಬಕ್ರೀದ್‌ ಹಬ್ಬ: ಶಿವಮೊಗ್ಗದಲ್ಲಿ ಮಹತ್ವದ ಮೀಟಿಂಗ್‌, ಏನೆಲ್ಲ ಚರ್ಚೆಯಾಯ್ತು? ಡಿಸಿ, ಎಸ್‌ಪಿ ಹೇಳಿದ್ದೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ಬಕ್ರೀದ್ ಹಬ್ಬದ ಹಿನ್ನೆಲೆ ನಗರದ ಡಿಎಆರ್ ಸಭಾಂಗಣದಲ್ಲಿ ಶನಿವಾರ ವಿವಿಧ ಧರ್ಮಗಳ ಮುಖಂಡರ ಶಾಂತಿ ಸಭೆ ನಡೆಸಲಾಯಿತು. ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಸೂಚನೆ ನೀಡಿವೆ.

➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ

ಇದೇ ವೇಳೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್‌, ಬಕ್ರೀದ್ ಹಬ್ಬದ ನೆಪದಲ್ಲಿ ಶಾಂತಿ ಕದಡಲು ಯತ್ನಿಸುವ ಕಿಡಿಗೇಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಹಬ್ಬವಾದರೂ ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಬೇಕು ಎಂದು ಅವರು ತಿಳಿಸಿದರು.

Bakrid-Meeting-By-Shimoga-DC-Prabhulinga-Kavalikatti-SP-B-Nikhil-ASP-Kariyappa

ಎಸ್‌ಪಿ ಹೇಳಿಕೆಯ ಪಾಯಿಂಟ್ಸ್‌

  • ಹಬ್ಬದ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಎದುರಾದರೂ ಸಾರ್ವಜನಿಕರು ಮೊದಲು ‘112’ ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಬೇಕು.
  • ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಒಟ್ಟು 30 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ತೀವ್ರ ನಿಗಾ ವಹಿಸಲಾಗಿದೆ.

“ಹಬ್ಬದ ಸಮಯ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು. ಸ್ವಚ್ಛತೆ ಮತ್ತು ಸುರಕ್ಷತೆ ಕುರಿತು ಈಗಾಗಲೇ ಎರಡು ಬಾರಿ ಸಭೆ ನಡೆಸಿ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ. ಹಬ್ಬದ ಸಂದರ್ಭ ಶಾಂತಿ ಸುವ್ಯವಸ್ಥೆ ಕಾಪಾಡುವುದು ಎಲ್ಲರ ಜವಾಬ್ದಾರಿ. ನಾವು ಎಲ್ಲರನ್ನೂ ಸಮಾನವಾಗಿ ಕಾಣುತ್ತೇವೆ. ಸೌಹಾರ್ದಯುತವಾಗಿ ಹಬ್ಬ ಆಚರಿಸಿ ರಾಜ್ಯಕ್ಕೆ ಮಾದರಿಯಾಗೋಣ.”

– ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾಧಿಕಾರಿ

ಸಭೆಯಲ್ಲಿ ಎಎಸ್ಪಿ ಕಾರಿಯಪ್ಪ, ಪಾಲಿಕೆ ಅಧಿಕಾರಿಗಳು ಹಾಗೂ ವಿವಿಧ ಧರ್ಮಗಳ ಪ್ರಮುಖರು, ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.