ಶಾಲೆ ಒಳಗೆ ಮಾಧ್ಯಮಗಳನ್ನು ಬಿಡದಂತೆ ಶಿವಮೊಗ್ಗದಲ್ಲಿ ಆಗ್ರಹ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS
ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಫೆಬ್ರವರಿ 2022
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಶಾಲೆ ಮಕ್ಕಳನ್ನು ಮಾಧ್ಯಮದ ವರದಿಗಾರರು ಅಪರಾಧಿಗಳ ಹಾಗೆ ಬಿಂಬಿಸುತ್ತಿದ್ದಾರೆ. ಹಾಗಾಗಿ ಮಾಧ್ಯಮ ಪ್ರತಿನಿಧಿಗಳು ಶಾಲೆ ಆವರಣ ಪ್ರವೇಶಿಸದಂತೆ ನಿರ್ಬಂಧ ವಿಧಿಸಬೇಕು ಎಂದು SDPI ಜಿಲ್ಲಾ ಘಟಕ ಆಗ್ರಹಿಸಿದೆ.

Shimoga Nanjappa Hospital checking list

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಿದ SDPI ಕಾರ್ಯಕರ್ತರು, ಮಾಧ್ಯಮದವರು ಶಾಲೆ ಮಕ್ಕಳಿಗೆ ಹಿಂಸೆ ನೀಡುತ್ತಿದ್ದಾರೆ. ಅಪರಾಧಿಗಳ ಹಾಗೆ ಚಿತ್ರಿಸಿ ಪ್ರಸಾರ ಮಾಡುತ್ತಿದ್ದಾರೆ. ಇದಕ್ಕೆ ತಡೆಯೊಡ್ಡಬೇಕು ಎಂದು ಮನವಿ ಮಾಡಿದರು.

ಹಿಜಾಬ್ ಕುರಿತ ಹೈಕೋರ್ಟ್ ಆದೇಶ ಕಾಲೇಜುಗಳಿಗೆ ಅನ್ವಯವಾಗಲಿದೆ. ಅದನ್ನು ಶಾಲೆ ಮಕ್ಕಳ ಮೇಲೆ ಅನ್ವಯಿಸಲು ಮುಂದಾಗಿರುವುದು ಸರಿಯಲ್ಲ. ಶಾಲೆ ಮಕ್ಕಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದರು.

ಇದನ್ನೂ ಓದಿ | ‘ನಾವೇನಾದರೂ ಕೊಲೆ ಮಾಡಲು ಬಂದಿದ್ದೇವಾ?’ ಶಿವಮೊಗ್ಗದಲ್ಲಿ ವಿದ್ಯಾರ್ಥಿನಿಯರ ಆಕ್ರೋಶ

Shimoga Live News Country Wise reach graphics

Leave a Comment