ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಸೆಪ್ಟಂಬರ್ 2020
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕೇಂದ್ರ ಮತ್ತು ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯಿದೆ, ಎಪಿಎಂಸಿ ತಿದ್ದುಪಡಿ ಕಾಯಿದೆ, ಕೃಷಿ ಕಾಯಿದೆ ಅಂಗೀಕರಿಸಿರುವುದನ್ನು ವಿರೋಧಿಸಿ ರೈತ ಸಂಘ ಕರ್ನಾಟಕ ಬಂದ್‍ಗೆ ಕರೆ ನೀಡಿದೆ. ಶಿವಮೊಗ್ಗದಲ್ಲೂ ಇವತ್ತು ಬಂದ್ ಘೋಷಣೆ ಮಾಡಲಾಗಿದೆ.
ಶಿವಮೊಗ್ಗದಲ್ಲಿ ಹೇಗಿದೆ ಬಂದ್?
ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್ ಘೋಷಿಸಲಾಗಿದೆ. ಆದರೆ ಶಿವಮೊಗ್ಗದಲ್ಲಿ ಬೆಳಗ್ಗೆಯಿಂದ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ವರದಿ ಪ್ರಕಟವಾಗುವ ಹೊತ್ತಿಗೆ (ಬೆಳಗ್ಗೆ 9 ಗಂಟೆ) ನಗರದಲ್ಲಿ ಜನಜೀವನ ಎಂದಿನಂತೆ ಇತ್ತು. ಬಸ್ಸುಗಳು, ಆಟೋ, ಟ್ರಾಕ್ಸ್, ವಾಹನ ಸಂಚಾರ ಸಾಮಾನ್ಯ ದಿನದ ಹಾಗೆಯೆ ಇತ್ತು.
ಸರ್ಕಾರಿ, ಖಾಸಗಿ ಬಸ್ ಸಂಚಾರಕ್ಕಿಲ್ಲ ಅಡ್ಡಿ
ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರ ಎಂದಿನಂತೆ ಇದೆ. ಬೆಳಗ್ಗೆಯಿಂದ ದೂರದೂರು ಮತ್ತು ಭದ್ರಾವತಿಗೆ ಕೆಎಸ್‍ಆರ್‍ಟಿಸಿ ಬಸ್‍ಗಳು ಸಂಚರಿಸುತ್ತಿವೆ. ಇನ್ನು, ಖಾಸಗಿ ಬಸ್ ನಿಲ್ದಾಣದಿಂದಲೂ ವಿವಿಧ ತಾಲೂಕಿಗೆ ತೆರಳುವ ಬಸ್‍ಗಳು ಎಂದಿನಂತೆ ಸಂಚರಿಸುತ್ತಿವೆ.
ಆಟೋ ಬಂದ್ ಆಗುವುದಿಲ್ಲ
ಆಟೋ ಮಾಲೀಕರು ಮತ್ತು ಚಾಲಕರ ಸಂಘಗಳು ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ಆಟೋ ಸಂಚಾರ ನಿಲ್ಲಿಸುವುದಿಲ್ಲ ಎಂದು ತಿಳಿಸಿದ್ದಾರೆ. ಹಾಗಾಗಿ ಬೆಳಗ್ಗೆಯಿಂದ ಆಟೋ ಸಂಚಾರವಿದೆ. ಭದ್ರಾವತಿ ಶಿವಮೊಗ್ಗ ನಡುವೆ ಸಂಚರಿಸುವ ಟ್ರಾಕ್ಸ್‍ಗಳು ಕೂಡ ನಿರಂತರವಾಗಿ ಸಂಚರಿಸುತ್ತಿವೆ.
ಹತ್ತು ಗಂಟೆ ಬಳಿಕ ಪರಿಸ್ಥಿತಿ ಬದಲು
ಹತ್ತು ಗಂಟೆ ಹೊತ್ತಿಗೆ ರೈತ ಸಂಘ, ಕಾರ್ಮಿಕ ಒಕ್ಕೂಟಗಳು, ಪ್ರಗತಿಪರ ಸಂಘಟನೆಗಳು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಿವೆ. ಬಸ್ ನಿಲ್ದಾಣದ ಮುಂಭಾಗದಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಆ ಬಳಿಕ ಅಂಗಡಿಗಳು ಬಂದ್ ಆಗುವ ಸಾಧ್ಯತೆ ಇದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]