ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಸೆಪ್ಟಂಬರ್ 2020
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ ಹಿನ್ನೆಲೆ, ಶಿವಮೊಗ್ಗದಲ್ಲಿ ಇವತ್ತು ರೈತರು, ದಲಿತರು, ಪ್ರಗತಿಪರ ಸಂಘಟನೆಗಳು, ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಮೆರವಣಿಗೆ ನಡೆಸಿದರು.
ಶಿವಮೊಗ್ಗದ ಕೇಂದ್ರ ಬಸ್ ನಿಲ್ದಾಣದ ಬಳಿ ಇರುವ ಅಶೋಕ ಸರ್ಕಲ್ನಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ಮಹಾವೀರ ಸರ್ಕಲ್ವರೆಗೆ ಮೆರವಣಿಗೆ ನಡೆಸಲಾಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಲಾಯಿತು.
ಸರ್ಕಲ್ಗಳಲ್ಲಿ ಸಭೆ
ಮೆರವಣಿಗೆ ಆರಂಭಕ್ಕೂ ಮೊದಲು ಅಶೋಕ ಸರ್ಕಲ್ನಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು. ಈ ವೇಳೆ ರೈತ ಸಂಘದ ಮುಖಂಡ ಹೆಚ್.ಅರ್.ಬಸವರಾಜಪ್ಪ, ಪ್ರಗತಿಪರ ಸಂಘಟನೆ ಮುಖಂಡ ಕೆ.ಎಲ್.ಅಶೋಕ್ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾಯ್ದೆಗಳಿಗೆ ತಂದಿರುವ ತಿದ್ದುಪಡಿ ಮತ್ತು ದೇಶಾದ್ಯಂತ ರೈತರು ವಿರೋಧ ವ್ಯಕ್ತಪಡಿಸುತ್ತಿರುವುದಕ್ಕೆ ಕಾರಣ ತಿಳಿಸಿದರು.
ಯಾರಿಗೂ ಒತ್ತಾಯ ಮಾಡಿಲ್ಲ
ಮಹಾವೀರ ಸರ್ಕಲ್ನಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು. ಈ ವೇಳೆ ಮಾತನಾಡಿದ ರೈತ ಮುಖಂಡ ಹೆಚ್.ಆರ್.ಬಸವರಾಜಪ್ಪ, ವರ್ತಕರು, ಆಟೋ, ಟ್ರಾಕ್ಸ್ ಚಾಲಕರು ಸೇರಿದಂತೆ ಯಾರಿಗೂ ಬಂದ್ ಮಾಡುವಂತೆ ಒತ್ತಡ ಹೇರಿಲ್ಲ. ಅವೈಜ್ಞಾನಿಕ ಲಾಕ್ಡೌನ್ನಿಂದಾಗಿ ಈಗಾಗಲೇ ಎಲ್ಲರು ನೋವು ಅನುಭವಿಸಿದ್ದಾರೆ. ಬಂದ್ನಿಂದ ಮತ್ತಷ್ಟು ಸಂಕಷ್ಟವಾಗಬಾರದು. ಆದರೆ ಅವರೆಲ್ಲರು ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದರು.
ಜಿಲ್ಲಾಧಿಕಾರಿಗೆ ಮನವಿ
ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗೆ ಅವರ ಮುಖಂಡರು ಮನವಿ ಸಲ್ಲಿಸಿದರು. ಆರು ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಿದ್ದು, ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]