ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಡಬೇಕು, ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಲ್ಲಿ ಆಗುತ್ತಿರುವ ಅನ್ಯಾಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 26ರಂದು ಬೆಂಗಳೂರು ಚಲೋ ಆಯೋಜಿಸಲಾಗಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ತಿಳಿಸಿದರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಆರ್.ಬಸವರಾಜಪ್ಪ, ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಬೆಂಗಳೂರು ಚಲೋ ಆಯೋಜಿಸಲಾಗಿದೆ ಎಂದರು.
12 ಪ್ರಮುಖ ಹಕ್ಕೊತ್ತಾಯ
ಬಲವಂತದ ಭೂ ಸ್ವಾಧೀನ, ಬೆಳೆಗೆ ಸೂಕ್ತ ಬೆಲೆ, ಮೈಕ್ರೋ ಫೈನಾನ್ಸ್‌ಗಳ ಹಾವಳಿಗೆ ತಡೆ, ವಿದ್ಯುತ್ ಖಾಸಗೀಕರಣ ಕೈಬಿಡಬೇಕು ಸೇರಿದಂತೆ ವಿವಿಧ 12 ಹಕ್ಕೊತ್ತಾಯ ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ, ಜೆಸಿಟಿಯು ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮುತ್ತಿಗೆ ಹಾಕಲಾಗುತ್ತಿದೆ ಎಂದು ಬಸವರಾಜಪ್ಪ ತಿಳಿಸಿದರು.
ಇದನ್ನೂ ಓದಿ » ಬಿಹಾರ ಫಲಿತಾಂಶ, ಶಿವಮೊಗ್ಗದಲ್ಲಿ ಯಡಿಯೂರಪ್ಪ, ರಾಘವೇಂದ್ರ ಫಸ್ಟ್ ರಿಯಾಕ್ಷನ್, ಏನಂದ್ರು?
ಪತ್ರಿಕಾಗೋಷ್ಠಿಯಲ್ಲಿ ಹಿಟ್ಟೂರು ರಾಜು, ಕೆ.ರಾಘವೇಂದ್ರ, ಹನುಮಂತಪ್ಪ, ಚಂದ್ರಪ್ಪ ಸೇರಿದಂತೆ ಹಲವರು ಇದ್ದರು.
LATEST NEWS
- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

- ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು?

- ಕರ್ನಾಟಕ ಸಂಘದಿಂದ ಪುಸ್ತಕಗಳಿಗೆ ಬಹುಮಾನ, ಕೃತಿಗಳಿಗೆ ಆಹ್ವಾನ, ಇಲ್ಲಿದೆ ಕಂಪ್ಲೀಟ್ ವಿವರ

About The Editor
ನಿತಿನ್ ಆರ್.ಕೈದೊಟ್ಲು






