ಶಿವಮೊಗ್ಗ : ಸಾಹಿತ್ಯ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಹೆಸರಿನಲ್ಲಿ ಗ್ರಂಥಾಲಯ (Library) ಸ್ಥಾಪನೆಗೆ ಸಚಿವ ಮಧು ಬಂಗಾರಪ್ಪ ವೈಯಕ್ತಿಕವಾಗಿ 5 ಲಕ್ಷ ರೂ. ಅನುದಾನ ನೀಡಿದ್ದಾರೆ. ಗೋಪಿಶೆಟ್ಟಿಕೊಪ್ಪದಲ್ಲಿರುವ ಸಾಹಿತ್ಯ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಮಂಜುನಾಥ್ ಅವರಿಗೆ ಸಚಿವ ಮಧು ಬಂಗಾರಪ್ಪ ಚೆಕ್ ಹಸ್ತಾಂತರಿಸಿದರು.
ಮಿನಿಸ್ಟರ್ ಹೇಳಿದ ಎರಡು ಪ್ರಮುಖಾಂಶ
ಸಾಹಿತ್ಯ ಗ್ರಾಮಕ್ಕೆ ಅಗತ್ಯವಿರುವ ಕಟ್ಟಡ ಸೇರಿದಂತೆ ಅಗತ್ಯ ಸೌಲಭ್ಯವನ್ನು ಸರ್ಕಾರದಿಂದ ಒದಗಿಸುವ ಪ್ರಯತ್ನ ಮಾಡುತ್ತೇನೆ. ಇಲ್ಲಿನ ಗ್ರಂಥಾಲಯ ಮಾದರಿ ಆಗಬೇಕು. ಸಾಹಿತಿಗಳು, ಓದುಗರಿಗೆ ಸಾಹಿತ್ಯ ಗ್ರಾಮ ನೆಚ್ಚಿನ ತಾಣವಾಗಬೇಕು.
ಬಂಗಾರಪ್ಪ ಅವರು ಕುವೆಂಪು ಅವರ ಸಾಹಿತ್ಯದ ಪ್ರೇಮಿಯಾಗಿದ್ದರು. ಅನೇಕ ಇಂಗ್ಲೀಷ್ ಕೃತಿಗಳನ್ನು ಕೂಡ ಓದಿಕೊಂಡಿದ್ದರು. ಅವರ ಕಾಲದಲ್ಲಿಯೇ ಕುವೆಂಪು ಅವರಿಗೆ ಕನ್ನಡ ರತ್ನ ಪ್ರಶಸ್ತಿ ನೀಡಲಾಯಿತು. ಅಲ್ಲದೆ ಕುವೆಂಪು ಪ್ರತಿಷ್ಠಾನವನ್ನು ಆರಂಭಿಸಿದ್ದರು. ರಾಜಕಾರಣಿಯಾಗಿ ಸಾಹಿತ್ಯ ಪ್ರೇಮಿಯಾಗಿದ್ದ ನಮ್ಮ ತಂದೆ ಹೆಸರಿನ ಗ್ರಂಥಾಲಯಕ್ಕೆ ಪುಸ್ತಕ ನೀಡುತ್ತಿರುವುದು ಸಂತೋಷವೆನಿಸುತ್ತದೆ.
ವಿಧಾನ ಪರಿಷತ್ ಸದಸ್ಯೆ ಬಲ್ಕಿಷ್ ಬಾನು, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್, ಪ್ರಮುಖರಾದ ವಿಜಯ ಕುಮಾರ್, ರಮೇಶ್ ಹೆಗ್ಡೆ, ನೃಪತುಂಗ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ, ಏನಿದು ರ‍್ಯಾಪಿಡೋ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200