ಶಿವಮೊಗ್ಗ ಲೈವ್.ಕಾಂ | SHIMOGA | 07 ಮೇ 2020
ಬ್ಯಾಂಕು, ಸಂಘ ಸಂಸ್ಥೆಗಳಲ್ಲಿ ಪ್ರತಿ ತಿಂಗಳು ಸಾಲದ ಕಂತು ವಸೂಲಿಯನ್ನು ತಡೆಯಬೇಕು ಅಂತಾ ಶಿವಮೊಗ್ಗ ಯುವ ಕಾಂಗ್ರೆಸ್ ಒತ್ತಾಯಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕರೋನ ಲೋಕ್‍ಡೌನ್‍ನಿಂದಾಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಹಲವು ಬ್ಯಾಂಕುಗಳು, ಖಾಸಗಿ ಫೈನಾನ್ಸ್ ಮತ್ತು ಸಂಘ ಸಂಸ್ಥೆಗಳು ಸಾಲದ ಕಂತು ಕಟ್ಟುವಂತೆ ಒತ್ತಾಯಿಸುತ್ತಿವೆ. ದೂರವಾಣಿ ಮೂಲಕ ಒತ್ತಡ ಹೇರುತ್ತಿವೆ ಎಂದು ಆರೋಪಿಸಿದರು.
ಮಹಿಳೆಯರು ಹಲವು ಸಂಘಗಳಲ್ಲಿ ಸಾಲ ಪಡೆದಿದ್ದಾರೆ. ಆದರೆ ಲಾಕ್‍ಡೌನ್‍ನಿಂದಾಗಿ ದುಡಿಮೆ ಇಲ್ಲದೆ ಆ ಸಾಲ ಕಟ್ಟಲು ಅಸಾದ್ಯವಾಗಿದೆ. ಹಾಗಾಗಿ ಜನಜೀವನ ಸಹಜ ಸ್ಥಿತಿಗೆ ಬರುವವರೆಗೆ ಬ್ಯಾಂಕುಗಳು, ಖಾಸಗಿ ಫೈನಾನ್ಸ್ ಸಂಸ್ಥೆಗಳು ಸಾಲದ ಕಂತುಗಳಿಗಾಗಿ ಒತ್ತಾಯಿಸದಂತೆ ಆದೇಶಿಸಬೇಕು. ಅಲ್ಲದೆ ಸಾಲದ ಕಂತು ಪಾವತಿಗೆ ಸೆಪ್ಟೆಂಬರ್ ಕೊನೆವರೆಗೆ ಕಾಲವಕಾಶ ನೀಡಬೇಕು ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಯುವ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್, ಗ್ರಾಮಾಂತರ ಅಧ್ಯಕ್ಷ ನಿತಿನ್ ರಾವ್, ರಾಜ್ಯ ಕಾರ್ಯದರ್ಶಿ ಆರ್ ಕಿರಣ್, ಜಿಲ್ಲಾ ಉಪಾಧ್ಯಕ್ಷ ಡಿ.ಆರ್.ಗಿರೀಶ್, ನಗರಾಧ್ಯಕ್ಷ ಎಚ್.ಪಿ.ಗಿರೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕೇಶ್ ಸೇರಿದಂತೆ ಹಲವರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]