ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 JULY 2024
SHIMOGA : ಬ್ಯಾಂಕಿಂಗ್ ಪರೀಕ್ಷೆಯಲ್ಲಿ (Banking Exam) ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗಬೇಕು, ಈ ಕ್ಷೇತ್ರದಲ್ಲಿ ಕನ್ನಡಿಗರ ಸಂಖ್ಯೆ ಹೆಚ್ಚಾಗಬೇಕು ಎಂಬ ಉದ್ದೇಶದಿಂದ ಬ್ಯಾಂಕಿಂಗ್ ಉದ್ಯೋಗಿಗಳ ಕನ್ನಡ ಕೂಟವು ಶಿವಮೊಗ್ಗದಲ್ಲಿ ಬ್ಯಾಂಕಿಂಗ್ ಪರೀಕ್ಷೆ ಮಾಹಿತಿ ಕಾರ್ಯಕ್ರಮ ಆಯೋಜಿಸಿದೆ.
ಜು.17ರಂದು ಶಿವಮೊಗ್ಗದ ಎಟಿಎನ್‌ಸಿ ಕಾಲೇಜು ಚಂದನ ಸಭಾಂಗಣದಲ್ಲಿ ಒಂದು ದಿನದ ಜಿಲ್ಲಾಮಟ್ಟದ ಮಾಹಿತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಬ್ಯಾಂಕಿಂಗ್ ಪರೀಕ್ಷೆ ತರಬೇತುದಾರ ಮತ್ತು ಪತ್ರಿಕೆಗಳಲ್ಲಿ ಪರೀಕ್ಷೆ ಲೇಖನ ಬರಹಗಾರ ಆರ್.ಕೆ.ಬಾಲಚಂದ್ರ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ.

ಆಸಕ್ತರು ಕೂಡಲೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಮಧ್ಯಾಹ್ನದ ಊಟದ ವ್ಯವಸ್ಥೆ ಇರಲಿದೆ. ಕಾರ್ಯಕ್ರಮದ ಕೊನೆಯಲ್ಲಿ ಪರೀಕ್ಷಾ ಸಿದ್ಧತೆ ಪುಸ್ತಕವನ್ನು ಬಹುಮಾನವಾಗಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಹರೀಶ್ ಕುಮಾರ್ 9743461647, ಮಂಜುನಾಥ್ 9742475368, ಸೌಮ್ಯಾ 9481836251 ಮೊಬೈಲ್ ನಂಬರ್ ಸಂಪರ್ಕಿಸಬಹುದು.
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ?
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





