ಶಿವಮೊಗ್ಗದಲ್ಲಿ ಬಸವ ಸಂಸ್ಕೃತಿ ಅಭಿಯಾನ, ನಗರಕ್ಕೆ ಆಗಮಿಸಲಿದೆ ರಥ, ಯಾವಾಗ? ಏನೆಲ್ಲ ಕಾರ್ಯಕ್ರಮ ಇರಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಶಿವಮೊಗ್ಗದಲ್ಲಿ ಬಸವ (Basava) ಸಂಸ್ಕೃತಿ ಅಭಿಯಾನ ಆಯೋಜಿಸಲಾಗಿದೆ. ಸೆ.17ರಂದು ಶಿವಮೊಗ್ಗ ನಗರದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ಅಭಿಯಾನದ ಸಮಿತಿ ತಿಳಿಸಿದೆ.

ನಗರದ ಬೆಕ್ಕಿನಕಲ್ಮಠದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಭಿಯಾನ ಸಮಿತಿಯ ಅಧ್ಯಕ್ಷ ಎಸ್‌.ರುದ್ರೇಗೌಡ, ಶರಣರ ತತ್ವಾದರ್ಶಗಳನ್ನು ಜನರಲ್ಲಿ ಪುನರುಜ್ಜೀವನಗೊಳಿಸಲು ರಾಜ್ಯಾದ್ಯಂತ ಸೆ.1ರಿಂದ ಅ.5ರವರೆಗೆ ಬಸವ ಸಂಸ್ಕೃತಿ ಅಭಿಯಾನ ನಡೆಸಲಾಗುತ್ತಿದೆ. ಸೆ.17ರಂದು ಶಿವಮೊಗ್ಗಕ್ಕೆ ರಥ ಆಗಮಿಸುತ್ತಿದೆ. ಅಂದು ವಿವಿಧ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಏನೆಲ್ಲ ಕಾರ್ಯಕ್ರಮ ಇರಲಿದೆ?

  • ಸೆ.17ರಂದು ಬೆಳಗ್ಗೆ ಪುರಲೆಯಲ್ಲಿ ಬಸವ ಸಂಸ್ಕೃತಿ ಅಭಿಯಾನ ರಥವನ್ನು ಸ್ವಾಗತಿಸಲಾಗುತ್ತದೆ.
  • ಬೆಳಗ್ಗೆ 11ಕ್ಕೆ ಶಿವಮೊಗ್ಗ ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಜೊತೆ ವಚನ ಸಂವಾದ.
  • ಸಂಜೆ 4 ರಿಂದ 6 ಗಂಟೆವರೆಗೆ ಉಷಾ ನರ್ಸಿಂಗ್‌ ಹೋಂ ಸರ್ಕಲ್‌ನಿಂದ ಕುವೆಂಪು ರಂಗಮಂದಿರದವರೆಗೆ ಪಾಯದಾತ್ರೆ.
  • ಸಂಜೆ 6 ಗಂಟೆಯಿಂದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕ ಸಮಾರಂಭ ಇರಲಿದೆ. ವಚನಗಾಯನ, ಉಪನ್ಯಾಸ, ಆಶೀರ್ವಚನ, ಪುಸ್ತಕ ಬಿಡುಗಡೆ ನಡೆಯಲಿದೆ.

Basava-Samskruti-ratha-to-Shimoga

ಯಾರೆಲ್ಲ ಭಾಗವಹಿಸ್ತಾರೆ?

ಶ್ರೀ ಮುರುಘರಾಜೇಂದ್ರ ಮಹಾಸಂಸ್ಥಾನದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಗದಗದ ತೋಂಟದಾರ್ಯ ಮಠದ ಡಾ. ತೋಂಟದ ಸಿದ್ದರಾಮ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಾಲ್ಕಿ ಹಿರೇಮಠದ ಡಾ. ಬಸವಲಿಂಗ ಸ್ವಾಮೀಜಿ, ಸಾಣೆಹಳ್ಳಿಯ ತರಳಬಾಳು ಶಾಖಾಮಠದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಮುಂಡರಗಿಯ ತೋಂಟದಾರ್ಯ ಮಠದ ಶ್ರೀ ನಿಜಗುಣ ಪ್ರಭು ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ.

Basava-Samskruti-ratha-to-Shimoga

ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರು ಪೀಠದ ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ ‘ನಡೆ ನುಡಿ ಸಿದ್ಧಾಂತ’ ಕುರಿತು ಉಪನ್ಯಾಸನ ನೀಡಲಿದ್ದಾರೆ. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಸಿ.ಸೋಮಶೇಖರ್‌ ‘ಶರಣರ ಕಾಯಕ ಸಂಸ್ಕೃತಿ’ ಕುರಿತು ಉಪನ್ಯಾಸ ನೀಡಲಿದ್ದಾರೆ.

Basava-Samskruti-ratha-to-Shimoga

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ ಉಪಸ್ಥಿತರಿರಲಿದ್ದಾರೆ. ವಿಧಾನ ಪರಿಷತ್‌ ಮಾಜಿ ಸದಸ್ಯ ಎಸ್‌.ರುದ್ರೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.

‘ಬಸವಣ್ಣನವರ ಬಸವ ಸಂಸ್ಕೃತಿಯನ್ನು ಮನೆ ಮನೆಗು ತಲುಪಿಸುವ ಕುರಿತು ಲಿಂಗಾಯತ  ಮಠಾಧಿಪತಿಗಳ ಒಕ್ಕೂಟ ಯೋಚಿಸಿತು‌. ತಂತ್ರಜ್ಞಾನ ಮುಂದುವರಿಕೆಯಾದರೂ ಅನೇಕ ಸಮಸ್ಯೆಗಳು ಕಾಡುತ್ತಿವೆ. ಭವಿಷ್ಯ ಆಶಾದಾಯಕವಾಗಿಲ್ಲ ಅನಿಸಿತು. ಅದಕ್ಕಾಗಿ ಈ ಕಾರ್ಯಕ್ರಮ ರೂಪಿಸಲಾಗಿದೆ. ಪ್ರಮುಖ ಆಶಯಗಳನ್ನು ಈ ಕಾರ್ಯಕ್ರಮ ಹೊಂದಿದೆ.’

  • ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಶ್ರೀ ಮುರುಘರಾಜೇಂದ್ರ ಮಹಾಸಂಸ್ಥಾನ

ಸುದ್ದಿಗೋಷ್ಠಿಯಲ್ಲಿ ಸೊರಬದ ಜಡೆ ಮಠದ ಡಾ. ಮಹಾಂತ ಸ್ವಾಮೀಜಿ, ಬಸವಕೇಂದ್ರದ ಡಾ. ಬಸವ ಮರುಳಸಿದ್ಧ ಸ್ವಾಮೀಜಿ, ಹಾರನಹಳ್ಳಿ ಚೌಕಿಮಠದ ಶ್ರೀ ನೀಲಕಂಠ ಸ್ವಾಮೀಜಿ, ಅಭಿಯಾನದ ಪ್ರಧಾನ ಕಾರ್ಯದರ್ಶಿ ಸಿ.ಎಸ್.ಷಡಾಕ್ಷರಿ, ಖಜಾಂಚಿ ಪಿ.ರುದ್ರೇಶ್‌, ಬಳ್ಳೆಕೆರೆ ಸಂತೋಷ್‌ ಸೇರಿ ಹಲವರು ಇದ್ದರು.

Prashanth-Loan-Advertisement.

ಇದನ್ನೂ ಓದಿ » ರಿಯಾಯತಿ ದರದಲ್ಲಿ ದಂಡ ಪಾವತಿ, ಇನ್ನೊಂದೇ ದಿನ ಬಾಕಿ, ಈವರೆಗೂ ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟು ಫೈನ್‌ ಕಟ್ಟಲಾಗಿದೆ?

Basava samskruti abhiyana in Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 11, 2025

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment