ಮಾಜಿ ಸಚಿವ ಬಿ.ಸಿ.ಪಾಟೀಲ್‌ ಅಳಿಯ ಆತ್ಮಹತ್ಯೆ, ಶಿವಮೊಗ್ಗದಲ್ಲಿ ಮರಣೋತ್ತರ ಪರೀಕ್ಷೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 JULY 2024

SHIMOGA : ಮಾಜಿ ಸಚಿವ ಬಿ.ಸಿ.ಪಾಟೀಲ್‌ ಅಳಿಯ (Son In Law) ಪ್ರತಾಪ್‌ ಕುಮಾರ್‌ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊನ್ನಾಳಿಯಲ್ಲಿ ಘಟನೆ ಸಂಭವಿಸಿದ್ದು ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆತರುವಾಗ ಮಾರ್ಗ ಮಧ್ಯದಲ್ಲೆ ಪ್ರತಾಪ್‌ ಕೊನೆಯುಸಿರೆಳೆದಿದ್ದಾರೆ.

ಜೋಳಕ್ಕೆ ಸಿಂಪಡಿಸುವ ಔಷಧ ಸೇವನೆ

ಮಾಜಿ ಸಚಿವ ಬಿ.ಸಿ.ಪಾಟೀಲ್‌ ಅವರ ಮೊದಲ ಪತ್ರಿಯ ಪತಿ ಪ್ರತಾಪ್‌ ಕುಮಾರ್‌ (41) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವತ್ತು ಹೊನ್ನಾಳಿ ತಾಲೂಕು ಮಲೆಬೆನ್ನೂರು ರಸ್ತೆಯ ಅರಣ್ಯ ಪ್ರದೇಶದಲ್ಲಿ ಪ್ರತಾಪ್‌ ಕುಮಾರ್‌, ಜೋಳಕ್ಕೆ ಸಿಂಪಡಿಸುವ ಔಷಧ ಸೇವಿಸಿದ್ದರು. ಅಸ್ವಸ್ಥರಾಗಿ ಪ್ರತಾಪ್‌ ಅವರೆ  ಕುಟುಂಬದವರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದರು. ಕೂಡಲೆ ಸಂಬಂಧಿಕರು, ಸ್ನೇಹಿತರು ಸ್ಥಳಕ್ಕೆ ತೆರಳಿ ಹೊನ್ನಾಳಿಯ ಆಸ್ಪತ್ರೆಗೆ ದಾಖಲು ಮಾಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆತರುವಾಗ ಕೊನೆಯುಸಿರೆಳೆದಿದ್ದಾರೆ.

BC Patil Son In Law Prathap issue. BY Vijayendra, BY Raghavendra, Dr Dhananjaya Sarji

ಶವಾಗಾರದ ಬಳಿ ದೌಡಾಯಿಸಿದ ಮುಖಂಡರು

ಪ್ರತಾಪ್‌ ಕುಮಾರ್‌ ಆತ್ಮಹತ್ಯೆ ವಿಚಾರ ತಿಳಿದು ಬಿಜೆಪಿ ಮುಖಂಡರು ಮೆಗ್ಗಾನ್‌ ಆಸ್ಪತ್ರೆಯ ಶವಾಗಾರದ ಬಳಿ ಬಂದು ಬಿ.ಸಿ.ಪಾಟೀಲ್‌ ಅವರಿಗೆ ಸಾಂತ್ವನ ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್‌ ಸದಸ್ಯ ಡಾ. ಧನಂಜಯ ಸರ್ಜಿ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಸೇರಿ ಹಲವು ನಾಯಕರು ಭೇಟಿ ನೀಡಿದ್ದರು.

ಬಿ.ಸಿ.ಪಾಟೀಲ್‌ ಅವರಿಗೆ ಗಂಡು ಮಗ ಇಲ್ಲ. ಆದರೆ ಪ್ರತಾಪ್‌ ಅಳಿಯನಾಗಿ ಮಗನ ಸ್ಥಾನ ತುಂಬಿದ್ದರು. ಪ್ರತಾಪ್‌ ನಮಗೆಲ್ಲ ಪರಿಚಿತರು. ವಿಷಯ ತಿಳಿದು ಇಲ್ಲಿಗೆ ಬಂದು ಬಿ.ಸಿ.ಪಾಟೀಲ್‌ ಅವರಿಗೆ ಸಾಂತ್ವನ ಹೇಳುತ್ತಿದ್ದೇವೆ.ಬಿ.ವೈ.ರಾಘವೇಂದ್ರ, ಶಿವಮೊಗ್ಗ ಸಂಸದ

BC Patil Son In Law Prathap

ಪ್ರತಾಪ್‌ ಸಾವು ಅನಿರೀಕ್ಷಿತ. ಅವರು ರಾಜಕೀಯವಾಗಿ ತುಂಬಾ ಸಕ್ರಿಯವಾಗಿದ್ದರು. ನಿಧನದ ವಿಚಾರ ತಿಳಿದು ನೋವಾಯ್ತು. ಬಿ.ಸಿ.ಪಾಟೀಲ್‌ ಅವರಿಗೆ ಧೈರ್ಯ ಹೇಳಿದ್ದೇವೆ.ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಹೊನ್ನಾಳಿ ವ್ಯಾಪ್ತಿಯಲ್ಲಿ ಸಂಭವಿಸಿದ ಕಹಿ ಘಟನೆ ಇದು. ಪ್ರತಾಪ್‌ ಅವರು ಬಿ.ಸಿ.ಪಾಟೀಲ್‌ ಅವರ ಮನೆ ಮಗನಂತಿದ್ದರು.ಎಂ.ಪಿ.ರೇಣುಕಾಚಾರ್ಯ, ಮಾಜಿ ಸಚಿವ

bc-patil-son-in-law-issue-shimoga

ನಾಳೆ ಅಂತ್ಯ ಸಂಸ್ಕಾರ

ಮೆಗ್ಗಾನ್‌ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಪ್ರತಾಪ್‌ ಕುಮಾರ್‌ ಅಂತ್ಯಕ್ರಿಯೆ ಮಂಗಳವಾರ ಚನ್ನಗಿರಿ ತಾಲೂಕು ಕತ್ತಲಗೆರೆ ಗ್ರಾಮದಲ್ಲಿ ನಡೆಸಲಾಗುತ್ತದೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್‌ ತಿಳಿಸಿದರು.

ಇದನ್ನೂ ಓದಿ – ಜೋಗಕ್ಕೆ ಸಾವಿರ ಸಾವಿರ ಜನ, ಮಳೆ, ಮಂಜಿನ ನಡುವೆ ಕಣ್ತುಂಬಿಕೊಂಡರು ಜಲಪಾತದ ವೈಭವ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 8, 2024

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

Leave a Comment