ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ ಲೈವ್.ಕಾಂ | SHIMOGA / BHADRAVATHI NEWS | 3 ಸೆಪ್ಟಂಬರ್ 2020
ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರಿಗೂ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಮತ್ತು ವೆಂಟಿಲೇಟರ್ ಕೊರತೆ ಉಂಟಾಗಿದೆ. ಕೊನೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಹೋಂ ಕ್ವಾರಂಟೈನ್ ಆಗಿದ್ದರು
ಅಪ್ಪಾಜಿಗೌಡ ಅವರು ಕಳೆದ ಎರಡು ದಿನದಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಆದ್ದರಿಂದ ಹೋಂ ಕ್ವಾರಂಟೈನ್ ಆಗಿದ್ದರು. ಇವತ್ತು ಆರೋಗ್ಯ ಸಮಸ್ಯೆ ಬಿಗಡಾಯಿಸಿದ್ದರಿಂದ, ಪತ್ನಿ ಶಾರದಾ ಅವರ ಒತ್ತಾಯದ ಮೇರೆಗೆ ಅವರು ಆಸ್ಪತ್ರೆಗೆ ತೆರಳಿದ್ದರು. ಅಪ್ಪಾಜಿಗೌಡ ಅವರ ಸ್ನೇಹಿತರು ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆತಂದಿದ್ದರು.
ಹೋದಲ್ಲೆಲ್ಲ ಬೆಡ್ ಕೊರತೆ
ಅಪ್ಪಾಜಿಗೌಡ ಅವರನ್ನು ಕರೆತಂದಾಗ ಶಿವಮೊಗ್ಗದ ಕೆಲವು ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಇಲ್ಲ ಎಂದು ತಿಳಿಸಿದ್ದಾರೆ. ಮೂರ್ನಾಲ್ಕು ಆಸ್ಪತ್ರೆಗೆ ಕರೆದೊಯ್ದರು ಎಲ್ಲಿಯೂ ಬೆಡ್ ಸಿಕ್ಕಿಲ್ಲ.
ಡಿಸಿ, ಡಿಹೆಚ್ಒಗೆ ಫೋನ್
ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಸಿಗದ ಹಿನ್ನೆಲೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಅವರಿಗೆ ಕರೆ ಮಾಡಿ ಮಾಹಿತಿ ತಿಳಿಸಲಾಗಿದೆ. ಕೂಡಲೆ ಅವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದರು. ಆದರೆ ಆಸ್ಪತ್ರೆಗೆ ದಾಖಲಾದ ಕೆಲವು ನಿಮಿಷದಲ್ಲಿ ಅಪ್ಪಾಜಿಗೌಡ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅವರ ಸ್ನೇಹಿತರು ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com






