ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ತೀರ್ಥಹಳ್ಳಿಯ ಬೆಜ್ವಳ್ಳಿಯ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ (Ayyappa Temple) ಜನವರಿ 14 ಮತ್ತು 15 ರಂದು ಮಕರ ಸಂಕ್ರಾಂತಿ ಉತ್ಸವ ಹಾಗೂ ಪೀಠ ಸ್ಥಾಪನೆಯ 14ನೇ ವರ್ಷದ ವರ್ಧಂತ್ಯುತ್ಸವ ನಡೆಯಲಿದೆ. ಈ ಸಂದರ್ಭ ನಟ ಶಿವರಾಜ್ ಕುಮಾರ್ ಸೇರಿದಂತೆ ಮೂವರಿಗೆ ಶ್ರೀ ಹರಿಹರಾತ್ಮಜ ಪೀಠ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಬೆಜ್ಜವಳ್ಳಿಯ ಶ್ರೀ ಅಯ್ಯಪ್ಪ ಸ್ವಾಮಿ ಧಾರ್ಮಿಕ ದತ್ತಿ ದೇಗುಲದ ಡಾ. ವಿಶ್ವಸಂತೋಷ ಭಾರತೀ ಸ್ವಾಮೀಜಿ ತಿಳಿಸಿದರು.
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ವಿಶ್ವಸಂತೋಷ ಭಾರತೀ ಸ್ವಾಮೀಜಿ, ಬೆಜ್ಜವಳ್ಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನವು ಕರ್ನಾಟಕದ ಶಬರಿಮಲೆ ಎಂದೇ ಖ್ಯಾತಿ ಪಡೆದಿದೆ. ಇಲ್ಲಿ ಜನವರಿ 14ರಂದು ಬೆಳಿಗ್ಗೆ 6 ಗಂಟೆಯಿಂದ ಪೂಜಾ ಕಾರ್ಯಕ್ರಮಗಳು ಆರಂಭವಾಗಲಿವೆ. ಅಂದು ತಿರುವಾಭರಣ ಉತ್ಸವ ಮತ್ತು ಅಡ್ಡಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ಜರುಗಲಿವೆ ಎಂದು ತಿಳಿಸಿದರು.

ಶಿವರಾಜ್ ಕುಮಾರ್ ಸೇರಿ ಹಲವರು ಭಾಗಿ
ಈ ಬಾರಿ ಮಕರ ಸಂಕ್ರಾಂತಿಯ ವಿಶೇಷವಾಗಿ ಚಲನಚಿತ್ರ ನಟ ಡಾ. ಶಿವರಾಜ್ ಕುಮಾರ್ ಅವರು ಕ್ಷೇತ್ರದ ಸಂಪ್ರದಾಯದಂತೆ ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿಗೆ ಅಭಿಷೇಕ ಮಾಡಲಿದ್ದಾರೆ. ಅವರೊಂದಿಗೆ ನಟರಾದ ಅರ್ಜುನ್ ಜನ್ಯ, ನವೀನ್ ಸಜ್ಜು ಸೇರಿದಂತೆ ಚಿತ್ರತಂಡದ ಹಲವು ಸದಸ್ಯರು ಭಾಗವಹಿಸಲಿದ್ದಾರೆ ಎಂದು ಡಾ. ವಿಶ್ವಸಂತೋಷ ಭಾರತೀ ಸ್ವಾಮೀಜಿ ತಿಳಿಸಿದರು.
ಇದನ್ನೂ ಓದಿ » ಶಿವಮೊಗ್ಗ ಪಾಲಿಕೆಗೆ 20ಕ್ಕೂ ಹೆಚ್ಚು ಲೋಕಾಯುಕ್ತರು, ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸಿಬ್ಬಂದಿ ತಬ್ಬಿಬ್ಬು
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ಅವರು ಕಾರ್ಯಕ್ರಮದಲ್ಲಿ ಇರಲಿದ್ದಾರೆ. ಶಾಸಕ ಆರಗ ಜ್ಞಾನೇಂದ್ರ ಅವರು ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಮೂವರಿಗೆ ಪ್ರಶಸ್ತಿ ಪ್ರದಾನ
ಇದೇ ಸಂದರ್ಭ ಶ್ರೀ ಹರಿಹರಾತ್ಮಜ ಪೀಠ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಈ ವರ್ಷ ನಟ ಶಿವರಾಜ್ ಕುಮಾರ್, ಜಾನಪದ ಗಾಯಕ ಕೆ. ಯುವರಾಜ್ ಹಾಗೂ ಹುಬ್ಬಳ್ಳಿಯ ಅಯ್ಯಪ್ಪ ಗುರುಸ್ವಾಮಿ ಶಿವಾನಂದ ಬಾರ್ಕಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಈ ಹಿಂದೆ ನಟಿ ಜಯಂತಿ, ನಟರಾದ ದೊಡ್ಡಣ್ಣ ಮತ್ತು ಅಂಬರೀಶ್ ಅವರಿಗೆ ಈ ಪ್ರಶಸ್ತಿ ನೀಡಲಾಗಿತ್ತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪೀಠದಿಂದ ಗೌರವ ಸಲ್ಲಿಸಲಾಗುತ್ತಿದೆ ಎಂದು ಸ್ವಾಮೀಜಿ ತಿಳಿಸಿದರು.
ಸಾವಿರ ಸಾವಿರ ಭಕ್ತರು ಭಾಗಿ
ರಾಜ್ಯದ ವಿವಿಧ ಭಾಗಗಳಿಂದ ಸುಮಾರು 30 ರಿಂದ 40 ಸಾವಿರ ಭಕ್ತರು ಅಂದು ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆಯಿದೆ. ಭಕ್ತರಿಗೆ ಸುಗಮ ದರ್ಶನಕ್ಕಾಗಿ ಎರಡು ಪ್ರತ್ಯೇಕ ಸಾಲುಗಳ ವ್ಯವಸ್ಥೆ ಮಾಡಲಾಗಿದೆ. ಅನ್ನಸಂತರ್ಪಣೆಯ ವ್ಯವಸ್ಥೆ ಕಲ್ಪಿಸಲಾಗಿದೆ ಜನವರಿ 15ರಂದು ಬೆಳಗ್ಗೆ ಆಶ್ಲೇಷ ಬಲಿ ಮಹಾಪೂಜೆ ನಡೆಯಲಿದೆ. ಸಂಜೆ 4ಕ್ಕೆ ಹನುಮಗಿರಿ ಮೇಳದವರಿಂದ ಯಕ್ಷಗಾನ ಆಯೋಜಿಸಲಾಗಿದೆ ಎಂದು ತಿಳಿಸಿದರು.
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು






