ಶಿವಮೊಗ್ಗ ಲೈವ್.ಕಾಂ |SHIMOGA NEWS | 22 ಅಕ್ಟೋಬರ್ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ನ ಹರಿಹಾಯ್ದಿದ್ದಾರೆ. ನಳೀನ್ ಕುಮಾರ್ ಕಟೀಲ್ ಅವರಿಗೆ ಸೀರೆ ಉಡಿಸಿದರೆ ಅವರು ಗಂಡಸು ಅಲ್ಲ, ಹೆಂಗಸಿನ ಅಲ್ಲ ಎಂದು ವ್ಯಂಗ್ಯವಾಡಿದರು.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಬಿಜೆಪಿಯೊಳಗೆ ಕೊಳೆತು ನಾರುವಷ್ಟು ವಿಷಯಗಳಿವೆ. ನಮ್ಮ ನಾಯಕರ ವಿರುದ್ಧ ಮಾತನಾಡುವ ನೈತಿಕತೆ ಅವರಿಗೆ ಇಲ್ಲ ಎಂದರು ಟೀಕಿಸಿದರು.
ಇನ್ನು, ಸಚಿವ ಈಶ್ವರಪ್ಪ ವಿರುದ್ಧವೂ ಬೇಳೂರು ಗೋಪಾಲಕೃಷ್ಣ ಹರಿಹಾಯ್ದರು. ಸಚಿವ ಈಶ್ವರಪ್ಪ ಅವರು ಹಿರಿಯರಿದ್ದಾರೆ. ಬೇಳೂರು ಬೈದರೆ ಸರಿ ಇರುವುದಿಲ್ಲ ಎಂದು ಎಚ್ಚರಿಸಿದರು.
ಬೇಳೂರು ಗೋಪಾಲಕೃಷ್ಣ ಟೀಕೆಯ ವಿಡಿಯೋ
‘ಬೈದವರೆ ಮುಂದಿನ ಚುನಾವಣೆಗೆ ಸೈಡ್ ಲೈನ್’
ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯ ಕೆಲವರು ಸುಖಾಸಮ್ಮನೆ ಟೀಕೆ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಸೇರಿದಂತೆ ಹಲವರು ಮುಂದಿನ ಚುನಾವಣೆಗೆ ಕಾಂಗ್ರೆಸ್ ಪಕ್ಷ ಇರುವುದಿಲ್ಲ ಎಂದು ಹೇಳುತ್ತಿದ್ದಾರೆ. ಹಾಗೆಲ್ಲ ಹೇಳುತ್ತಿರುವವರೆ ಮುಂದಿನ ಚುನಾವಣೆಗೆ ಇರುವುದಿಲ್ಲ. ಬಿಜೆಪಿಯಲ್ಲಿ ಮೂಲೆಗುಂಪಾಗುತ್ತಾರೆ ಎಂದರು.

‘ಸಿಎಂಗೆ ಎಚ್ಚರಿಕೆ ಕೊಡುತ್ತಿದ್ದೇನೆ’
ನೈತಿಕ ಪೊಲೀಸ್’ಗಿರಿ ಕೆಲವು ಸಂದರ್ಭ ಮಾಡಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ರಾಜ್ಯವನ್ನು ಮುನ್ನಡೆಸುವವರು ಇಂತಹ ಹೇಳಿಕೆ ನೀಡುವುದು ಸರಿಯಲ್ಲ. ಸಿಎಂ ಹೇಳಿಕೆಯಿಂದ ಎಲ್ಲಾ ಜಾತಿ, ಧರ್ಮದ ನೈತಿನ ಪೊಲೀಸ್’ಗಿರಿ ಹೆಚ್ಚಳವಾಗಲಿದೆ ಎಂದು ಬೇಳೂರು ಗೋಪಾಲಕೃಷ್ಣ ಎಚ್ಚರಿಕೆ ನೀಡಿದರು.
ಮುಸ್ಲಿಮರ ಮತಕ್ಕಾಗಿ ಈ ರೀತಿ ಹೇಳಿಕೆ
ಇನ್ನು, RSS ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಬೇಳೂರು ಗೋಪಾಲಕೃಷ್ಣ, ಮುಸ್ಲಿಮರ ಮತಕ್ಕಾಗಿ ಕುಮಾರಸ್ವಾಮಿ ಅವರು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






