SHIVAMOGGA LIVE NEWS | 8 NOVEMBER 2023
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIMOGA | ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಯಾರು ಬೇಕಾದರು ಆಕಾಂಕ್ಷಿ ಆಗಬಹುದು. ಟಿಕೆಟ್ ಕೇಳುವ ಹಕ್ಕು ಎಲ್ಲರಿಗು ಇದೆ. ನಾನು ಕೂಡ ಪ್ರಬಲ ಆಕಾಂಕ್ಷಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಜಿಲ್ಲೆಯಲ್ಲಿ ಬಿಜೆಪಿಯನ್ನು ಸೋಲಿಸಲು ಪ್ರಬಲ ಅಭ್ಯರ್ಥಿ ಅಗತ್ಯ. ತಾನು ಪ್ರಬಲ ಅಭ್ಯರ್ಥಿಯಾಗಿದ್ದು ಟಿಕೆಟ್ ಕೇಳಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗು ಈ ವಿಚಾರ ತಿಳಿಸಿದ್ದೇನೆ. ಟಿಕೆಟ್ ಸಿಗುವ ವಿಶ್ವಾಸ ಇದೆ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಲೋಕಸಭೆ ಚುನಾವಣೆಗೆ ಟಿಕೆಟ್ ಕೇಳುವ ಹಕ್ಕು ಎಲ್ಲರಿಗು ಇದೆ. ಜಿಲ್ಲಾಧ್ಯಕ್ಷ ಸುಂದರೇಶ್, ಗೀತಾ ಶಿವರಾಜ್ ಕುಮಾರ್, ಇಸ್ಮಾಯಿಲ್ ಖಾನ್ ಸೇರಿದಂತೆ ಹಲವರು ಆಕಾಂಕ್ಷಿಯಾಗಿದ್ದಾರೆ. ನಾನೂ ಕೂಡ ಆಕಾಂಕ್ಷಿ. ಸರ್ವೆ ನಡೆಸಿ ಟಿಕೆಟ್ ನೀಡಲಿ ಎಂದರು.
ಯಾರು ಜಿಲ್ಲಾ ಉಸ್ತುವಾರಿ ಸಚಿವರು?
ಇನ್ನು, ಜಿಲ್ಲಾ ಪ್ರಗತಿ ಪರಿಶೀಲನೆ ಸಭೆಗೆ ಆಹ್ವಾನ ಬಂದಿಲ್ಲ. ಜಿಲ್ಲೆಯ ಉಸ್ತುವಾರಿ ಸಚಿವರು ಯಾರು ಅನ್ನುವುದು ತಮಗೆ ಗೊತ್ತಿಲ್ಲ. ಈ ಹಿಂದೆ ಮಧು ಬಂಗಾರಪ್ಪ ಅವರು ಸಚಿವರಾಗಿದ್ದರು. ಈಗ ಯಾರಿದ್ದರೋ ಗೊತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದೇನೆ ಎಂದರು.
ಯಾರ ಬಗ್ಗೆ ಮಾತನಾಡಲು ತಮಗೆ ಭಯವಿಲ್ಲ. ಹೆದರಿ ಹೋಗಲು ನಾನು ಕುಮಾರ್ ಬಂಗಾರಪ್ಪ ಅವರಂತಲ್ಲ ಎಂದು ಮಾರ್ಮಿಕವಾಗಿ ಹೇಳಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೈಗಾರಿಕೆ ಅಭಿವೃದ್ಧಿ, ಉದ್ಯೋಗ ಸೃಷ್ಟಿ, ಇಲ್ಲಿದೆ ಸಂವಾದದಲ್ಲಿ ಮಿನಿಸ್ಟರ್ ಹೇಳಿದ 3 ಪ್ರಮುಖಾಂಶ
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






