ಶಿವಮೊಗ್ಗ: ಬೇಸಿಗೆ ಬೆಳೆಗೆ ನೀರು ಒದಗಿಸಲು ಭದ್ರಾ ಜಲಾಶಯದ (Bhadra Dam) ಎಡ ಮತ್ತು ಬಲದಂಡೆ ನಾಲೆಗಳಿಂದ 120 ದಿನ ನಿರಂತರ ನೀರು ಹರಿಸಲು ನಿರ್ಧರಿಸಲಾಗಿದೆ. ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 88ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನೀರು ಹರಿಸಲು ನಿರ್ಧರಿಸಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಸಚಿವ ಎಸ್.ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಜನವರಿ 3ರಿಂದ ಎಡದಂಡೆ ನಾಲೆಗೆ ಮತ್ತು ಜನವರಿ 8ರಿಂದ ಬಲದಂಡೆ ನಾಲೆಗೆ ನಿರಂತರವಾಗಿ 120 ದಿನ ನೀರನ್ನು ಹರಿಸಲು ನಿರ್ಧರಿಸಲಾಗಿದೆ.
ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಅಂಶುಮಂತ್, ಶಿವಮೊಗ್ಗ ಶಾಸಕ ಎಸ್.ಎನ್.ಚನ್ನಬಸಪ್ಪ, ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಚಂದ್ರಭೂಪಾಲ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಅಭಿಯಂತರರಾದ ರವಿಕುಮಾರ್, ರವಿಚಂದ್ರ ಸೇರಿದಂತೆ ದಾವಣಗೆರೆ, ಬಳ್ಳಾರಿ, ಶಿವಮೊಗ್ಗ ಜಿಲ್ಲೆಗಳ ನೀರಾವರಿ ಇಲಾಖೆಯ ಅಧಿಕಾರಿಗಳು, ರೈತ ಮುಖಂಡರು ಭಾಗವಹಿಸಿದ್ದರು.
ಇದನ್ನೂ ಓದಿ » ಶಿವಮೊಗ್ಗದ ರಾಘವೇಂದ್ರ ಮಠಕ್ಕೆ ಇವತ್ತು ಜನವೋ ಜನ, ಎಲ್ಲ ದೇಗುಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಳ
Bhadra Dam
LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು






