ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 2 ಜನವರಿ 2020
ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜನವರಿ 8ರಂದು ಭಾರತ್ ಬಂದ್ ಮಾಡಲಾಗುತ್ತಿದೆ. ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಬಂದ್’ಗೆ ಕರೆ ನೀಡಿದ್ದು, ಗ್ರಾಮೀಣ ಕರ್ನಾಟಕವು ಸಂಪರ್ಣವಾಗಿ ಬಂದ್ ಆಗಲಿದೆ ಎಂದು ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಆರ್.ಬಸವರಾಜಪ್ಪ, ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಭಾರತ್ ಬಂದ್ ಮಾಡಲಾಗುತ್ತಿದೆ. ಆ ದಿನ ಗ್ರಾಮೀಣ ಕರ್ನಾಟಕವು ಬಂದ್ ಅಗಲಿದೆ ಎಂದರು.
ದೇಶದ ಸುಮಾರು 200ಕ್ಕೂ ಹೆಚ್ಚು ರೈತ ಸಂಘಟನೆಗಳನ್ನು ಒಳಗೊಂಡ ಅಖಿಲ ಭಾರತ ರೈತ ಸಂಗರ್ಷ ಸಮಿತಿ ರಚಿಸಲಾಗಿದೆ. ಎಲ್ಲ ಸಂಘಟನೆಗಳು ಬಂದ್’ಗೆ ಕೈ ಜೋಡಿಸಿವೆ ಎಂದರು.
ಋಣಮುಕ್ತ ಕಾಯ್ದೆ, ಡಾ.ಸ್ವಾಮಿನಾಥನ್ ವರದಿ ಜಾರಿ, ರಾಜ್ಯದ ಪ್ರವಾಹ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು, ಬಗರ್ ಹುಕುಂ ಸಕ್ರಮಗೊಳಿಸುವುದು, ಭೂ ಸುಧಾರಣೆ ತಿದ್ದುಪಡಿ ಕೈ ಬಿಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಂದ್ ಮಾಡಲಾಗುತ್ತಿದೆ ಎಂದು ಹೆಚ್.ಆರ್.ಬಸವರಾಜಪ್ಪ ಸ್ಪಷ್ಟಪಡಿಸಿದರು.
ಡಾ.ಚಿಕ್ಕಸ್ವಾಮಿ, ಹಿಟ್ಟೂರು ರಾಜು, ರಾಮಚಂದ್ರ, ಟಿ.ಎಂ.ಚಂದ್ರಪ್ಪ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422