ಶಿವಮೊಗ್ಗ: ನಗರದ ನಟನಂ ಬಾಲ ನಾಟ್ಯ ಕೇಂದ್ರದ ವಿದ್ಯಾರ್ಥಿನಿ ಎನ್.ಪಿ.ತೇಜಸ್ವಿನಿ ಅವರ ಭರತನಾಟ್ಯ (Bharatanatyam) ರಂಗಪ್ರವೇಶ ಕಾರ್ಯಕ್ರಮವನ್ನು ಸೆ.14ರಂದು ಸಂಜೆ 5.30ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರದ ಮುಖ್ಯಸ್ಥ ಡಾ. ಎಸ್.ಕೇಶವಕುಮಾರ್ ಪಿಳ್ಳೈ ತಿಳಿಸಿದರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಂಗಪ್ರವೇಶ ನಮ್ಮ ಕೇಂದ್ರದ 22ನೇ ರಂಗ ಪ್ರವೇಶ ಕಾರ್ಯಕ್ರಮವಾಗಿದೆ. ತೇಜಸ್ವಿನಿ ಎರಡನೆ ತರಗತಿಯಿಂದ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾರೆ. ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರೂ ಆಗಿದ್ದಾರೆ ಎಂದರು.
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಸಾಧುಶೆಟ್ಟಿ ಸಂಘದ ಅಧ್ಯಕ್ಷ ಎನ್.ಉಮಾಪತಿ, ಸೂಡಾ ಮಾಜಿ ಅಧ್ಯಕ್ಷ ಎನ್.ರಮೇಶ್ ಅತಿಥಿಗಳಾಗಿ ಆಗಮಿಸಲಿದ್ದಾರೆ. ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ವಿ.ರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಶವಕುಮಾರ್ ಪಿಳ್ಳೈ ಉಪಸ್ಥಿತರಿರಲಿದ್ದಾರೆ ಎಂದರು.

ವಿ.ರಾಜು ಮಾತನಾಡಿ, ತೇಜಸ್ವಿನಿ ಮೂಲತಃ ಜಿಲ್ಲೆಯವರೆ ಆಗಿದ್ದಾರೆ. ಎನ್.ಪ್ರಶಾಂತ್, ಹರಿಣಾಕ್ಷಿ ಅವರ ಪುತ್ರಿ. ತೇಜಸ್ವಿನಿ ಸಾಧುಶೆಟ್ಟಿ ಸಮಾಜದಿಂದ ರಂಗಪ್ರವೇಶ ಮಾಡುತ್ತಿರುವ ಮೊದಲ ಹೆಣ್ಣುಮಗು ಎಂದರು.
ಸುದ್ದಿಗೋಷ್ಠಿಯಲ್ಲಿ ಎನ್.ಪಿ.ತೇಜಸ್ವಿನಿ, ಹರಿಣಾಕ್ಷಿ, ರೇಖಾ ವಿ.ರಾಜು, ಕುಮಾರಸ್ವಾಮಿ ಇದ್ದರು.

ಇದನ್ನೂ ಓದಿ » ‘ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ ದೊಡ್ಡ ತಪ್ಪು ಮಾಡಿಬಿಟ್ಟೆ’, ಸಂಸದ ರಾಘವೇಂದ್ರ ಬೇಸರ

Bharatanatyam rangapravesh in shimoga
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





