ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಆಗಸ್ಟ್ 2020
ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರ ಮನೆಯ ಮೇಲೆ ನಡೆದ ಹಲ್ಲೆಯನ್ನು ತಾಲ್ಲೂಕು ಭೋವಿ ಸಮಾಜ ತೀವ್ರವಾಗಿ ಖಂಡಿಸುತ್ತದೆ ಎಂದು ಅಧ್ಯಕ್ಷ ಧೀರರಾಜ್ ಹೊನ್ನವಿಲೆ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ದೇಶದ್ರೋಹಿ ಸಂಘಟನೆಗಳ ಪದಾಧಿಕಾರಿಗಳು ಕ್ಷುಲ್ಲಕ ವಿಷಯಕ್ಕೆ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರ ಮನೆ ಮೇಲೆ ದಾಳಿ ಮಾಡಿದ್ದಾರೆ. ಇದನ್ನು ಭೋವಿ ಸಮಾಜ ತೀವ್ರವಾಗಿ ಖಂಡಿಸುತ್ತದೆ. ಗಲಭೆ ನಡೆಸಿದವರು ಯಾರೇ ಆಗಿದ್ದರೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಅಖಂಡ ಶ್ರೀನಿವಾಸ ಮೂರ್ತಿಯವರ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಬೇಕು ಮತ್ತು ಅವರಿಗೆ ಆಗಿರುವ ಆಸ್ತಿ ಪಾಸ್ತಿ ನಷ್ಟವನ್ನ ನಷ್ಟ ಮಾಡಿದವರಿಂದಲೇ ವಸೂಲಿ ಮಾಡಬೇಕು. ಗುಂಡಾ ಕಾಯ್ದೆ ಜಾರಿಗೆ ತಂದು ಎಲ್ಲರನ್ನು ಬಂಧಿಸಬೇಕು. ಉತ್ತರ ಪ್ರದೇಶ ಸರ್ಕಾರದ ಮಾದರಿಯಲ್ಲಿ ಕಾನೂನುಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಂಘದ ಜಿಲ್ಲಾಧ್ಯಕ್ಷ ಎಸ್.ರವಿಕುಮಾರ್ ಸೇರಿದಂತೆ ಮುಖಂಡರು ಪತ್ರಿಕಾಗೋಷ್ಠಿಯಲ್ಲಿದ್ದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂದೆ ತಾಲ್ಲೂಕು ಭೋವಿ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಸವರಾಜ್, ಗಣೇಶ್, ನವುಲೆ ಮಂಜುನಾಥ್, ಕೃಷ್ಣಪ್ಪ ಸೇರಿದಂತೆ ಹಲವರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]