ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 16 JULY 2023
SHIMOGA : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಬಿಗ್ ರಿಲೀಫ್ (Relief) ಸಿಕ್ಕಿದೆ. ಉಡುಪಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂಗೀಕರಿಸಿದೆ.
ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಸಂಭ್ರಮ
ವಿಷಯ ತಿಳಿಯುತ್ತಿದ್ದಂತೆ ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಸಂಭ್ರಮಾಚಾರಣೆ ಮಾಡಿದರು. ಬಿಜೆಪಿ ಕಚೇರಿ ಮುಂಭಾಗ ಪಟಾಕಿ ಸಿಡಿಸಿ ಸಿಹಿ ಹಂಚಿದರು. ಬಿಜೆಪಿ ಕಚೇರಿಗೆ ಆಗಮಿಸಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಮುಖಂಡರು, ಕಾರ್ಯಕರ್ತರು ಸಿಹಿ ತಿನ್ನಿಸಿ ಅಭಿನಂದಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಸೇರಿದಂತೆ ಹಲವರು ಈ ವೇಳೆ ಇದ್ದರು.
ಏನಿದು ಪ್ರಕರಣ?
2022ರ ಏಪ್ರಿಲ್ 11ರಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ತನ್ನ ಸಾವಿಗೆ ಕೆ.ಎಸ್.ಈಶ್ವರಪ್ಪ ಅವರೆ ಕಾರಣ ಎಂದು ಸಂತೋಷ್ ಪಾಟೀಲ್ ಮೆಸೇಜ್ ಕಳುಹಿಸಿದ್ದರು ಎಂದು ಆಪಾದಿಸಲಾಗಿತ್ತು. ಇದೆ ಕಾರಣಕ್ಕೆ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಡಿಸಿ ಕಚೇರಿಯಲ್ಲಿ ಮಹತ್ವದ ಮೀಟಿಂಗ್, ಅಧಿಕಾರಿಗಳಿಗೆ 3 ಪಾಯಿಂಟ್ ಸೂಚನೆ
ಪ್ರಕರಣ ಸಂಬಂಧ ಉಡುಪಿ ಪೊಲೀಸರು ಈಶ್ವರಪ್ಪ ಮತ್ತು ಇತರರ ಹೇಳಿಕೆ ಪಡೆದಿದ್ದರು. ಅಲ್ಲದೆ ಸಂತೋಷ್ ಪಾಟೀಲ್ ಕುಟುಂಬದವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದರು. ಸಾಕ್ಷ್ಯಾಧಾರ ಸಿಗದ ಹಿನ್ನೆಲೆ ಈಶ್ವರಪ್ಪ ವಿರುದ್ಧ ಪೊಲೀಸರು ಬಿ – ರಿಪೋರ್ಟ್ ಸಲ್ಲಿಸಿದ್ದರು. ಸಂತೋಷ್ ಪಾಟೀಲ್ ಅವರ ಕುಟುಂಬದವರು ಪೊಲೀಸ್ ಬಿ – ರಿಪೋರ್ಟ್ ವಿರುದ್ಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪೊಲೀಸರ ಬಿ – ರಿಪೋರ್ಟ್ ಅಂಗೀಕರಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422